ಬಳ್ಳಾರಿ,ಸೆ.22: ಸರ್ಕಾರಿ ಹುದ್ದೆಗೆ ನೇಮಕಗೊಂಡಿರುವ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಗೌರವ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಹೇಳಿದರು.
ಶನಿವಾರ, ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ 88 ನೇ ಸಾಮಾನ್ಯ ಬುನಾದಿ ತರಬೇತಿಯ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರಿ ಕೆಲಸ-ಕಾರ್ಯಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಸಮಯ ಪಾಲನೆ ಹೊಂದಬೇಕು. ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಶುಭವಾಗಲಿ ಎಂದು ಆಶಿಸಿದರು. ಈ ವೇಳೆ ಜಿಲ್ಲಾ ತರಬೇತಿ ಸಂಸ್ಥೆಯ ಉಪಪ್ರಾಚಾರ್ಯ ಶೇಷಗಿರಿ ನಾಯ್ಕ ಸೇರಿದಂತೆ ಅಭ್ಯರ್ಥಿಗಳು ಉಪಸ್ಥಿತರಿದ್ದರು.


