ತಿರುವನಂತಪುರಂ, (ಆಕ್ಟೋಬರ್ 13): ಆರ್.ಎಸ್.ಎಸ್ ಕಾರ್ಯಕರ್ತರಿಂದ ನಿರಂತರ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮನನೊಂದ ಟೆಕ್ಕಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೇರಳದ ತಿರುವನಂತಪುರಂ ಲಾಡ್ಜ್ ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನಂದ್ ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ. ಸಾವಿಗೂ ಮುನ್ನ ಆನಂದ ಇನ್ ಸ್ಟಾಗ್ರಾಂ ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ಆರ್.ಎಸ್.ಎಸ್ ಸದಸ್ಯರಿಂದ ತನಗೆ ನಿರಂತ ಲೈಂಗಿಕ ಕಿರುಕುಳ ನೀಡಲಾಗಿದೆ. ಬಾಲ್ಯದಿಂದಲೂ ತಾನು ದೌರ್ಜ್ಯನ್ಯಕ್ಕೊಳಗಾಗಿದ್ದು, ಮಾನಸಿಕವಾಗಿ ನೊಂದಿದ್ದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದು ಭಾರೀ ಸಂಚಲನ ಮೂಡಿಸಿದೆ.