ಅಂಧ್ರದಲ್ಲೂ ‘ಶಕ್ತಿ ಯೋಜನೆ’ ; ಸಿದ್ದರಾಮಯ್ಯ ಜೊತೆ ಯೋಜನೆ ಸಂಬಂಧ ಆಂಧ್ರ ಸಚಿವರ ನಿಯೋಗ ಚರ್ಚೆ

Ravi Talawar
ಅಂಧ್ರದಲ್ಲೂ ‘ಶಕ್ತಿ ಯೋಜನೆ’ ; ಸಿದ್ದರಾಮಯ್ಯ ಜೊತೆ ಯೋಜನೆ  ಸಂಬಂಧ ಆಂಧ್ರ ಸಚಿವರ ನಿಯೋಗ ಚರ್ಚೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ ಸಂಬಂಧ ಚರ್ಚಿಸಲು ನೆರೆಯ ರಾಜ್ಯವಾದ ಆಂಧ್ರಪ್ರದೇಶದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಶುಕ್ರವಾರ ಭೇಟಿಯಾದರು.

ಆಂಧ್ರ ಸರ್ಕಾರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಹಾಗೂ ಇಲಾಖೆಗಳ ಅಧಿಕಾರಿಗಳ ತಂಡ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲವು ಹೊತ್ತು ಚರ್ಚೆ ನಡೆಸಿದರು.

ರಾಜ್ಯದಲ್ಲಿ ಜಾರಿಯಾಗಿರುವ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ಯ ಆರ್ಥಿಕತೆ, ಸಾಧನೆಗಳ ಕುರಿತಂತೆ ಚರ್ಚೆ ನಡೆಸಿದರು. ಮುಖ್ಯವಾಗಿ ಶಕ್ತಿ ಯೋಜನೆಯ ಯಶಸ್ಸಿನಿಂದ ಆರ್ಥಿಕತೆಗೆ ಚೈತನ್ಯ ಸಿಕ್ಕಿರುವುದು ಮತ್ತು ಮಹಿಳಾ ಸಬಲೀಕರಣದ ದೃಷ್ಟಿಯಿಂದ ಆಗಿರುವ ಬದಲಾವಣೆಗಳ ಕುರಿತಂತೆ ಚರ್ಚಿಸಿ ಸಮಗ್ರ ಮಾಹಿತಿ ಪಡೆದುಕೊಂಡರು.

ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ವಿನಿಮಯ ಮಾಡಿಕೊಂಡರು.

WhatsApp Group Join Now
Telegram Group Join Now
Share This Article