ಬೆಂಗಳೂರು, ಜ.24: ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರನ್ನಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾಸಭಾದ ಆಡಳಿತ ಮತ್ತು ಸಂಘಟನೆಯ ದೃಷ್ಟಿಯಿಂದ ಈಶ್ವರ ಖಂಡ್ರೆ ಅವರನ್ನು ಹಿರಿಯ ಉಪಾಧ್ಯಕ್ಷರನ್ನಾಗಿ ಸಭಾದ ಸಂವಿಧಾನ ದತ್ತವಾದ ಅಧಿಕಾರದಂತೆ ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.