ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಚಿತ್ರ ಛೂ ಮಂತರ್  

Ravi Talawar
ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಚಿತ್ರ ಛೂ ಮಂತರ್  
WhatsApp Group Join Now
Telegram Group Join Now
    ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ,  ಕರ್ವ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಛೂ‌ ಮಂತರ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
     ವಿಭಿನ್ನ ಕಂಟೆಂಟ್ ವುಳ್ಳ ಈ ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಧಿಕ ಸಂಖ್ಯೆಯಲ್ಲಿ ಟ್ರೇಲರ್ ವೀಕ್ಷಣೆಯಾಗುತ್ತಿದ್ದು, ಕುತೂಹಲ ಮೂಡಿಸಿ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.
      ಜನವರಿ 10 ರಂದು ಬಹ ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗುತ್ತಿದೆ. ಸಾಮಾನ್ಯವಾಗಿ ಸಂಕ್ರಾಂತಿ ಸಮಯದಲ್ಲಿ ಬೇರೆ ಭಾಷೆಗಳ ದೊಡ್ಡ ಚಿತ್ರಗಳು ಬಿಡುಗಡೆಯಾಗುವುದರಿಂದ ಕನ್ನಡದ ಚಿತ್ರಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಿಡುಗಡೆ ಮಾಡುವುದಿಲ್ಲ. ನಮ್ಮ ಚಿತ್ರದ ಕಂಟೆಂಟ್ ಚೆನ್ನಾಗಿದೆ. ಜನರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ನಮ್ಮ ಚಿತ್ರ ಪ್ರೇಕ್ಷಕರಿಗೆ ಮೆಚ್ಚುಗೆಯಾಗುವ ಭರವಸೆಯಿದೆ ಹಾಗಾಗಿ ಸಂಕ್ರಾಂತಿ ಸಮಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ನಿರ್ಮಾಪಕ ತರಣ್ ಶಿವಪ್ಪ ತಿಳಿಸಿದ್ದಾರೆ.
     ಈಗಾಗಲೇ‌ ಟೀಸರ್, ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ತಾರಾಬಳಗದಲ್ಲಿ  ಶರಣ್ , ಚಿಕ್ಕಣ್ಣ,    ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ  ಸಂಗೀತ ನಿರ್ದೇಶನವಿರುವ ‘ಛೂ ಮಂತರ್’ ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
WhatsApp Group Join Now
Telegram Group Join Now
Share This Article