ಅಕ್ರಮವಾಗಿ ಚಿನ್ನ ಸಾಗಣೆ: ಶಶಿ ತರೂರ್​ ಆಪ್ತ ಸಹಾಯಕನ ಬಂಧನ

Ravi Talawar
ಅಕ್ರಮವಾಗಿ ಚಿನ್ನ ಸಾಗಣೆ: ಶಶಿ ತರೂರ್​ ಆಪ್ತ ಸಹಾಯಕನ ಬಂಧನ
WhatsApp Group Join Now
Telegram Group Join Now

ನವದೆಹಲಿ,30: ವಿದೇಶದಿಂದ ತಂದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಆಪ್ತ ಸಹಾಯಕ ಶಿವಕುಮಾರ್ ಪ್ರಸಾದ್​ ಎಂಬವರನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ನಿನ್ನೆ ದುಬೈನಿಂದ ಬಂದಿದ್ದ ವ್ಯಕ್ತಿಯನ್ನು ಬರಮಾಡಿಕೊಳ್ಳಲು ಶಿವಕುಮಾರ್ ಪ್ರಸಾದ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ವಿದೇಶದಿಂದ ಆಗಮಿಸಿದ್ದ ವ್ಯಕ್ತಿ ಸುಮಾರು 500 ಗ್ರಾಂ ಚಿನ್ನವನ್ನು ಪ್ರಸಾದ್‌ಗೆ ನೀಡಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಕಸ್ಟಮ್ಸ್​ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಈ ವೇಳೆ ಶಿವಕುಮಾರ್ ಪ್ರಸಾದ್ ನಾನು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

WhatsApp Group Join Now
Telegram Group Join Now
Share This Article