ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಧ್ಯಕ್ಷರ ಕುರ್ಚಿ ಅಲುಗಾಡುತ್ತಿದೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇತ್ತು. ಈ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ. ಕರ್ನಾಟಕಕ್ಕೆ ಚುನಾವಣಾಧಿಕಾರಿಯಾಗಿ ಶಿವರಾಜ್‌ಸಿಂಗ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಹೊಸ ಅಧ್ಯಕ್ಷರ ನೇಮಕವಾಗುವ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿಗಳ ನೇಮಕ: ಶಿವರಾಜ್ ಸಿಂಗ್ ಚೌಹಾಣ್ ಹೆಗಲಿಗೆ ಕರ್ನಾಟಕ
ಕರ್ನಾಟಕಕ್ಕೆ ಮಾತ್ರವಲ್ಲದೆ ಆಂಧ್ರಪ್ರದೇಶಕ್ಕೆ ಚುನಾವಣಾ ಅಧಿಕಾರಿಯಾಗಿ ಪಿ.ಸಿ. ಮೋಹನ್ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣಕ್ಕೆ ಚುನಾವಣಾ ಅಧಿಕಾರಿಯಾಗಿ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಭಾರತದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಯಲಿದೆ.