ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ; ಸಂಪೂರ್ಣ ಅನುಷ್ಠಾನಕ್ಕೆ ಕ್ರಮ: ಶಿವರಾಜ್ ತಂಗಡಗಿ

Pratibha Boi
ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ; ಸಂಪೂರ್ಣ ಅನುಷ್ಠಾನಕ್ಕೆ ಕ್ರಮ: ಶಿವರಾಜ್ ತಂಗಡಗಿ
WhatsApp Group Join Now
Telegram Group Join Now

ಬೆಳಗಾವಿ: ಇತ್ತೀಚಿಗೆ ಕನ್ನಡಕ್ಕಾಗಿ ಕದನಗಳು ನಡಿತ್ತಾನೆ ಇವೆ. ಅವುಗಳನ್ನು ನಿಯಂತ್ರಣಗೊಳ್ಳಿಸಲು ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸದನದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಪ್ರಶ್ನೆ ಕೇಳಿದ್ರು. ಕನ್ನಡ ನಾಮಫಲಕ ಅಳವಡಿಸೋ ಅಭಿಯಾನ ಸಂಪೂರ್ಣ ಆಗಿಲ್ಲ. ನಾಮಫಲಕ ಸಂಪೂರ್ಣ ಆಗಬೇಕು. ಇದು ನಿರಂತರವಾಗಿ ಆಗೋ ಕೆಲಸ. ಅಪೂರ್ಣ ಆಗೋ ಪ್ರಶ್ನೆ ಇಲ್ಲ ಅಂತ ಸಚಿವರು ಹೇಳ್ತಾರೆ. ಹುಬ್ಬಳ್ಳಿಯಲ್ಲಿ ಉತ್ತಮವಾಗಿ ಆಗಿದೆ. ಮೈಸೂರಿನಲ್ಲಿ ಜಾರಿ ಆಗಿಲ್ಲ. ಕನ್ನಡ ನಾಮಫಲಕ ಕಡ್ಡಾಯ ಶೀಘ್ರವೇ ಮುಗಿಸಬೇಕು. ಬೆಂಗಳೂರಿನಲ್ಲಿ ಕಡ್ಡಾಯ ಕನ್ನಡ ನಾಮಫಲಕ ನಿಯಮ ಸಮರ್ಪಕವಾಗಿ ಆಗ್ತಿಲ್ಲ. ಇದರಲ್ಲಿ ಯಾರ ನಿರ್ಲಕ್ಷ್ಯ ಆಗುತ್ತಿದೆ. ಅನುಷ್ಠಾನ ಸಮಿತಿ ಸರ್ಕಾರ ಮಾಡಿಲ್ಲ. ಕೂಡಲೇ ಕಡ್ಡಾಯ ಕನ್ನಡ ನಾಮಫಲಕ ಆದೇಶ ಪೂರ್ಣ ಆಗಬೇಕು ಎಂದು ಹೇಳಿದರು.
ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳ ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು 60% ರಷ್ಟು ಪ್ರದರ್ಶಿಸಲಾಗಿದೆ ಎಂದು ಸಚಿವ ತಂಗಡಗಿ ಉತ್ತರ ನೀಡಿದ್ದಾರೆ.
WhatsApp Group Join Now
Telegram Group Join Now
Share This Article