ಕಿರುಚಿತ್ರ ಫಸ್ಟ್ ಸ್ಯಾಲರಿ  

Ravi Talawar
ಕಿರುಚಿತ್ರ ಫಸ್ಟ್ ಸ್ಯಾಲರಿ  
WhatsApp Group Join Now
Telegram Group Join Now
     ಸಿನಿಮಾ ಮತ್ತು ಮಾಧ್ಯಮ  ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ  ಶ್ರೀರಾಘವೇಂದ್ರ ಚಿತ್ರವಾಣಿ. ಇದರ  ಸ್ಥಾಪಕರಾದ ದಿ. ಡಿ.ವಿ ಸುಧೀಂದ್ರ ಅವರು ಕನ್ನಡ ಚಿತ್ರರಂಗದ ಅಗ್ರ ಸಿನಿಮಾ ಪ್ರಚಾರಕರ್ತರು.
     ಜೊತೆಗೆ ತಮ್ಮದೇ ಸಂಸ್ಥೆಯಿಂದ ಒಲವಿನ ಉಡುಗೊರೆ; ಗಣೇಶನ ಮದುವೆ, ಗುಂಡನ ಮದುವೆ, ಪಟ್ಟಣಕ್ಕೆ ಬಂದ ಪುಟ್ಟ, ನಗು ನಗುತಾ ನಲಿ ಚಿತ್ರಗಳನ್ನು ದಿ. ಸುಧೀಂದ್ರ ಅವರು  ನಿರ್ಮಾಣ ಮಾಡಿದ್ದರು.
    ಪ್ರಸ್ತುತ ಈ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ
‘ಫಸ್ಟ್ ಸ್ಯಾಲರಿ’ ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ, ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ.  ‘ಫಸ್ಟ್ ಸ್ಯಾಲರಿ’ ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.
     ಈ ಕಿರುಚಿತ್ರದಲ್ಲಿ ಹಿರಿಯ ಕಲಾವಿದೆ ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್,ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್‍ನಲ್ಲೇ ಈ  ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
     ಕರೋನ ಸಮಯದಲ್ಲಿ ‘ಕರಾಳ ರೋಗ ನಾಶ’ ಕಿರುಚಿತ್ರ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಅನುಭವ ಪವನ್ ವೆಂಕಟೇಶ್ ಅವರದಾಗಿದೆ. “ಫಸ್ಟ್ ಸ್ಯಾಲರಿ’ ಕಿರುಚಿತ್ರ  24 ನಿಮಿಷವಿದ್ದು ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್. ರವಿ ಸಾಸನೂರು ಕೆಲಸ ಮಾಡಿದ್ದಾರೆ ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜೊತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ಧಾರೆ. ಡಿ.ಎಸ್ ಸುನೀಲ್ ಸುಧೀಂದ್ರ ಮತ್ತು ಡಿ.ಜಿ ವಾಸುದೇವ್ ಪತ್ರಿಕಾ ಸಂಪರ್ಕವಿದ್ದು ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ” ಎಂದು ನಿರ್ದೇಶಕ ಪವನ್ ವೆಂಕಟೇಶ್ ಮಾಹಿತಿ ನೀಡಿದ್ದಾರೆ.
WhatsApp Group Join Now
Telegram Group Join Now
Share This Article