ಮುಜರಾಯಿ ಇಲಾಖೆಗಳಿಂದ ದೇಗುಲ, ಮಠಗಳನ್ನ ಮುಕ್ತಗೊಳಿಸಿ: ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ

Ravi Talawar
ಮುಜರಾಯಿ ಇಲಾಖೆಗಳಿಂದ ದೇಗುಲ, ಮಠಗಳನ್ನ ಮುಕ್ತಗೊಳಿಸಿ: ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ
WhatsApp Group Join Now
Telegram Group Join Now

ರಾಯಚೂರು, ಸೆ.23: ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡುಗೆ  ದನದ ಕೊಬ್ಬು, ಹಂದಿ ಕೊಬ್ಬು ಬಳಸಿರೋ ವಿವಾದ ಭುಗಿಲೆದ್ದಿದೆ. ಸದ್ಯ ಈ ಬಗ್ಗೆ ರಾಯಚೂರಿನಲ್ಲಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ  ಅವರು ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಮುಜರಾಯಿ ಇಲಾಖೆಗಳಿಂದ ದೇಗುಲ, ಮಠಗಳನ್ನ ಮುಕ್ತಗೊಳಿಸಿ. ದೇವಸ್ಥಾನ, ಮಠಮಾನ್ಯಗಳನ್ನು ಕೇಂದ್ರ ಸರ್ಕಾರ ನಿರ್ವಹಣೆ ಮಾಡಲಿ. ಈ ಸಂಬಂಧ ಕೇಂದ್ರ ಸರ್ಕಾರ ಹೊಸ ಕಾಯ್ದೆ ಜಾರಿಗೊಳಿಸಲಿ ಎಂದು ಆಗ್ರಹಿಸಿದ್ದಾರೆ.

ಮಠಮಾನ್ಯ, ದೇವಸ್ಥಾನಗಳು ಆಯಾ ಪ್ರಾಂತ್ಯದ ಭಕ್ತರಿಗೆ ಸಂಪ್ರದಾಯಗಳಿಗೆ ಸಂಬಂಧಿಸಿದ ಶ್ರದ್ಧಾಕೇಂದ್ರಗಳು. ಇದನ್ನು ರಾಜ್ಯ ರಾಜಧಾನಿಯಲ್ಲಿ ಕುಳಿತು ನಡೆಸಲು ಆಗಲ್ಲ. ದೇಗುಲದಲ್ಲಿ ಸಮಸ್ಯೆ, ದೋಷ ಆದಾಗ ಸರ್ಕಾರ ಪರಿಶೀಲಿಸಬೇಕು. ಸುಮೋಟೋ ಹಾಕಿ ಅದನ್ನು ಸರಿಪಡಿಸುವ ಕೆಲಸವಷ್ಟೇ ಮಾಡಬೇಕು. ದೇಗುಲದ ವಿಚಾರದಲ್ಲಿ ಸರ್ಕಾರ ತಲೆಹಾಕವುದು, ಪಾವಿತ್ರ್ಯತೆ, ಸಂಪ್ರದಾಯಗಳನ್ನು ಬದಲಾಯಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಅಂಬೇಡ್ಕರ್​ ಅವರು ನಮಗೆ ಸಂವಿಧಾನವನ್ನು ನೀಡಿದ್ದಾರೆ. ಆ ಪವಿತ್ರ ಗ್ರಂಥದಲ್ಲಿ ಇಂತಹುದಕ್ಕೆ ಅವಕಾಶ ಇಲ್ಲ ಎಂದು ಸುಬುಧೇಂದ್ರ ತೀರ್ಥರು ತಿಳಿಸಿದರು.

 

WhatsApp Group Join Now
Telegram Group Join Now
Share This Article