ಬಳ್ಳಾರಿ,ಅ.೧೦: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ೫೦ ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಭಾಷಣ, ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ನಗರದ ಶ್ರೀ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭೆ ಮತ್ತು ಜ್ಞಾನವನ್ನು ಪ್ರದರ್ಶಿಸಿ ಪ್ರಶಸ್ತಿ ಪುರಸ್ಕಾರ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಭಾಷಣ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿನಿಯರಾದ ಲಾವಣ್ಯ, ಮದಿಹಾ ಅಂಜುA ಮತ್ತು ಸಾಯಿ ಹರಿಣಿ ಕ್ರಮಾನುಕವಾಗಿ ಪ್ರಥಮ, ದ್ವೀತಿಯ ಮತ್ತು ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಜಿ.ಇಂದ್ರಜಾ, ರೋಷನ್ ಮತ್ತು ಕೀರ್ತಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಚಿತ್ರಕಲೆ ಸ್ಪರ್ಧೆಯಲ್ಲಿ ಕುಮಾರಿ ತನುಶ್ರೀ, ದಿಶಾ ಮತ್ತು ಬುಶ್ರಾ ಫಾತೀಮಾ ಪ್ರಥಮ,ದ್ವೀತಿಯ ಹಾಗೂ ತೃತೀಯ ಸ್ಥಾನದ ಶ್ರೇಣಿಯಲ್ಲಿದ್ದಾರೆ
ವಿದ್ಯಾರ್ಥಿಗಳಿಗೆ ಅರಣ್ಯ ಮತ್ತು ಪರಿಸರ ಇಲಾಖೆಯ ಸಚಿವ ಈಶ್ವರ ಖಂಡ್ರೆ, ಪಿ.ಎಂ. ನರೇಂದ್ರಸ್ವಾಮಿ, ಸಂಸದ ಈ.ತುಕಾರಾಮ್, ಶಾಸಕಿ ಅನ್ನಪೂರ್ಣ ತುಕಾರಾಮ್, ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಮತ್ತು ಎಸ್. ಪಿ ಶೋಭಾರಾಣಿ ಮತ್ತು ಇತರ ಗಣ್ಯರು ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.
ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ಪಿ.ಎನ್.ಸುರೇಶ್ ಮಾತನಾಡಿ, ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.
ಶಾಲೆಯ ಮುಖ್ಯೋಪಾಧ್ಯಯ ವೀರೇಶ್.ಯು ಮಾತಾನಾಡಿ, ನಮ್ಮ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರುತ್ತಿರುವುದು ಶಾಲೆಗೆ ಹೆಮ್ಮೆಯ ವಿಷಯ. ಈ ಸಾಧನೆ ಅವರ ಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಫಲವಾಗಿದೆ. ಮುಂದಿನ ದಿನಗಳಲ್ಲಿಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಈ ರೀತಿಯ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿ ಎಂದು ಹಾರೈಸುತ್ತೇನೆ.” ಎಂದು ಹೇಳಿದರು.