ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್: ವಿಜಯೇಂದ್ರ

Ravi Talawar
ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳು  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್: ವಿಜಯೇಂದ್ರ
WhatsApp Group Join Now
Telegram Group Join Now

ಬೆಂಗಳೂರು, ಜೂನ್ 6: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಸಂಭ್ರಮಾಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ  ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸರ್ಕಾರದ ವೈಫಲ್ಯವೇ ಕಾರಣ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಸರ್ಕಾರದ ವಿರುದ್ಧ ಹಲವು ಪ್ರಶ್ನೆಗಳನ್ನು ಎತ್ತಿವೆ. ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು ಕಾಲ್ತುಳಿತ ಸಂಬಂಧ ಪೊಲೀಸರ ಅಮಾನತು ಮಾಡಿರುವುದು ನಾಟಕವಷ್ಟೇ. ‘ಒಂದು ತಿಂಗಳು ಸಸ್ಪೆಂಡ್ ಅಂತಾ ನಾಟಕ ಮಾಡುತ್ತೇವೆ, ಬೇಸರ ಮಾಡಿಕೊಳ್ಳಬೇಡಿ’ ಎಂಬುದಾಗಿ ಮೊದಲೇ ಹೇಳಿರುತ್ತಾರೆ ಅಷ್ಟೇ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟೀಕಿಸಿದರು.

ಐಪಿಎಲ್ ಕಪ್ ಗೆದ್ದಿದ್ದು ಆರ್​ಸಿಬಿ, ಫೋಟೋಗೆ ಪೋಸ್ ಕೊಟ್ಟಿದ್ದು ಕೆಪಿಸಿಸಿ ತಂಡ. ಅಂಧ ಮುಖ್ಯಮಂತ್ರಿ, ಅಂಧ ರಾಜ್ಯ ಎಂದು ಅಶೋಕ್ ಕಿಡಿಕಾರಿದರು. . ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡದ್ದು ಇದರಲ್ಲಿ ತಪ್ಪಿಲ್ಲ ಎಂದು ಅಶೋಕ್ ಹೇಳಿದರು. ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಎಂದು ವಿಜಯೇಂದ್ರ ಆರೋಪಿಸಿದರು.

WhatsApp Group Join Now
Telegram Group Join Now
Share This Article