ಹನಿಟ್ರ್ಯಾಪ್‌ನಲ್ಲಿ ಯಾರನ್ನೂ ರಕ್ಷಿಸುವುದಿಲ್ಲ: ಸಿದ್ದರಾಮಯ್ಯ

Ravi Talawar
ಹನಿಟ್ರ್ಯಾಪ್‌ನಲ್ಲಿ ಯಾರನ್ನೂ ರಕ್ಷಿಸುವುದಿಲ್ಲ: ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು, ಮಾರ್ಚ್ 21: ಸಚಿವರು, ಶಾಸಕರ ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆಎನ್ ರಾಜಣ್ಣ ಅವರು ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿ ಈ ಬಗ್ಗೆ ಉತ್ತರಿಸುವಂತೆ ಆಗ್ರಹಿಸಿದ್ದರು. ಅಲ್ಲದೆ, ಹನಿಟ್ರ್ಯಾಪ್​​ನಂಥ ಕೃತ್ಯಕ್ಕೆ ಕುಮ್ಮಕ್ಕು ಕೊಟ್ಟವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ ಕೆಲವು ಮಂದಿ ನಾಯಕರು ಆಗ್ರಹಿಸಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಪ್ರಕರಣದಲ್ಲಿ ಯಾರೇ ಆಗಿದ್ದರೂ ತೊಂದರೆಗೆ ಒಳಗಾಗಿದ್ದರೆ ರಕ್ಷಣೆ ಕೊಡಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ಕಾನೂನಿನ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು. ರಾಜಣ್ಣ ಅವರು ದೂರು ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸಲಾಗುತ್ತದೆ ಎಂದು ಗೃಹ ಸಚಿವರು ಉತ್ತರಿಸಿದ ಮೇಲೆ ಪುನ: ಪ್ರಸ್ತಾಪಿಸುವುದು ತರವಲ್ಲ. ಹನಿಟ್ರ್ಯಾಪ್ ಯಾರೇ ಮಾಡಿಸಿದ್ದರೂ ಅದು ತಪ್ಪೇ ಎಂದು ಸಿಎಂ ಹೇಳಿದರು. ‘‘ಎತ್ತು ಈಯಿತು ಎಂದ ಮಾತ್ರಕ್ಕೆ ಕೊಟ್ಟಿಗೆಗೆ ಕಟ್ಟು’’ ಎಂದು ಹೇಳಲಾಗುವುದಿಲ್ಲ. ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಾಗಿತ್ತು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

WhatsApp Group Join Now
Telegram Group Join Now
Share This Article