ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ: ಸಿದ್ದರಾಮಯ್ಯ ಗುಡುಗು

Ravi Talawar
ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ: ಸಿದ್ದರಾಮಯ್ಯ ಗುಡುಗು
WhatsApp Group Join Now
Telegram Group Join Now

*ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ

*ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರ

*ಪ್ರಾಸಿಕ್ಯೂಷನ್ ವಿರುದ್ಧ ಕಾನೂನು ಹೋರಾಟ

* ಸರ್ಕಾರ ಅಸ್ಥಿರಗೊಳಿಸಲು ಪ್ರತಿಪಕ್ಷಗಳ ಷಡ್ಯಂತ್ರ

* ಪ್ರಾಸಿಕ್ಯೂಷನ್ ವಿರುದ್ಧ  ಸಿಎಂ ಸಿದ್ದರಾಮಯ್ಯ ಗುಡುಗು 

ಬೆಂಗಳೂರು, ಆಗಸ್ಟ್ 17 : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ:ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ.ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು. ಎಂದರು.

ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ:ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು.

WhatsApp Group Join Now
Telegram Group Join Now
Share This Article