ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್​ಮೇಲ್ : ಸಿದ್ದರಾಮಯ್ಯ ವಾಗ್ದಾಳಿ

Ravi Talawar
ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್​ಮೇಲ್ : ಸಿದ್ದರಾಮಯ್ಯ ವಾಗ್ದಾಳಿ
WhatsApp Group Join Now
Telegram Group Join Now

ಮೈಸೂರು: ಮುಡಾ ಹಗರಣದ ವಿಚಾರದಲ್ಲಿ ಬಿಜೆಪಿ ಬ್ಲ್ಯಾಕ್​ಮೇಲ್ ತಂತ್ರ ಮಾಡುತ್ತಿದೆ. ಇಲ್ಲದ ಹಗರಣವನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇಂದು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಮುಡಾ ವಿಚಾರದಲ್ಲಿ ಬ್ಲ್ಯಾಕ್​ಮೇಲ್ ತಂತ್ರ ಮಾಡುತ್ತಿದ್ದಾರೆ. ಇಲ್ಲದ ಹಗರಣವನ್ನು ಸೃಷ್ಟಿಸುತ್ತಿದ್ದಾರೆ. ಬಿಜೆಪಿಯವರಿಗೆ ಯಾವ ಐಡಿಯಾಲಜಿಗಳೂ ಇಲ್ಲ. ಅವರು ಯಾವತ್ತು ನ್ಯಾಯದ ಪರವಾಗಿಲ್ಲ. ಈಗಾಗಲೇ ಮುಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ. ಇದಕ್ಕಿಂತ ಇನ್ನೇನು ಬೇಕು ಎಂದರು.

ನ್ಯಾಯಾಂಗ ತನಿಖೆಯನ್ನು ಕೇಂದ್ರ ಸಚಿವರು ಅನುಮಾನದಿಂದ ನೋಡಿದರೆ ಅದರಲ್ಲಿ ಅರ್ಥ ಇದೆಯಾ?. ಬಿಜೆಪಿ ಕಾಲದಲ್ಲಿ ಎಷ್ಟು ಭ್ರಷ್ಟಾಚಾರಗಳು ನಡೆದಿವೆ. ಯಾವುದಾದರೂ ನ್ಯಾಯಾಂಗ ತನಿಖೆಗೆ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಮ್ಮ ಅವಧಿಯಲ್ಲಿ 7-8 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇವೆ ಎಂದು ಹೇಳಿದರು.

ಮುಡಾ ಹಗರಣ ವಿಚಾರದಲ್ಲಿ ನನಗೆ ಯಾವ ಬೇಸರವಿಲ್ಲ. ತಪ್ಪೇ ಮಾಡಿಲ್ಲ ಅಂದ್ರೆ ಬೇಸರ ಯಾಕೆ?. 40 ವರ್ಷ ರಾಜಕಾರಣದಲ್ಲಿ ನನ್ನ ಮೇಲೆ ಬಹಳ ಆರೋಪಗಳು ಬಂದಿವೆ. ಇದನ್ನು ರಾಜಕೀಯವಾಗಿ ಎದುರಿಸುತ್ತೇನೆ. ಬಿಜೆಪಿಯವರು ಪಾದಯಾತ್ರೆ ಮಾಡುವುದಾದರೆ ಮಾಡಲಿ. ಅದನ್ನು ರಾಜಕೀಯವಾಗಿ ಎದುರಿಸಲು ನಾವೂ ಸಹ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article