ಸಚಿವ ನಾಗೇಂದ್ರ ರಾಜೀನಾಮೆಯನ್ನು ಕೇಳಿಲ್ಲ : ಪುನರುಚ್ಛರಿಸಿದ ಸಿದ್ದರಾಮಯ್ಯ

Ravi Talawar
ಸಚಿವ ನಾಗೇಂದ್ರ ರಾಜೀನಾಮೆಯನ್ನು ಕೇಳಿಲ್ಲ : ಪುನರುಚ್ಛರಿಸಿದ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ರಾಜ್ಯ ಸರ್ಕಾರ ಅಧಿಕೃತವಾಗಿ ವಹಿಸಬೇಕು ಮತ್ತು ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂಬ ಆಗ್ರಹ ಬಿಜೆಪಿ ನಾಯಕರಿಂದ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ತಾವು ಸಚಿವರ ರಾಜೀನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.

ತಮ್ಮ ಸಂಪುಟ ಸಹೋದ್ಯೋಗಿ ಬಿ ನಾಗೇಂದ್ರ ಅವರ ರಾಜೀನಾಮೆಯನ್ನು ಕೇಳಿಲ್ಲ. ಅಭಿವೃದ್ಧಿ ನಿಗಮದ ಅವ್ಯವಹಾರದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ತನಿಖೆಯ ವರದಿಯನ್ನು ಆಧರಿಸಿ ನಿರ್ಧರಿಸುತ್ತೇವೆ. ಎಸ್ ಐಟಿ ತ್ವರಿತವಾಗಿ ತನಿಖೆ ಮಾಡುತ್ತಿದ್ದು ಶೀಘ್ರವೇ ವರದಿ ನೀಡಲಿದೆ ಎಂದು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು

ನಾನು ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ. ಎಸ್‌ಐಟಿ ವರದಿ ಇನ್ನೂ ಬಂದಿಲ್ಲ. ಕಳೆದೆರಡು ದಿನಗಳ ಹಿಂದೆಯೇ ಎಸ್‌ಐಟಿ ರಚನೆಯಾಗಿತ್ತು. ಅವರು ತಮ್ಮ ವರದಿಯಲ್ಲಿ ಏನು ನೀಡುತ್ತಾರೆಂದು ನೋಡೋಣ. ಅವರು ವರದಿ ಸಲ್ಲಿಸಿದ ನಂತರವೇ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ, ಎಸ್ ಐಟಿ ಸೂಕ್ತ ತನಿಖೆ ಮಾಡುವ ವಿಶ್ವಾಸವಿದೆ’ ಎಂದು ತಿಳಿಸಿದರು.

ಬಹುಕೋಟೆ ಹಗರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರೋದ್ರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ. ನಾಗೇಂದ್ರಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂಬ ಸುದ್ದಿ ಕಳೆದ ಮೂರ್ನಾಲ್ಕು ದಿನಗಳಿಂದ ಕೇಳಿಬರುತ್ತಿದೆ.

WhatsApp Group Join Now
Telegram Group Join Now
Share This Article