ಮೈಸೂರು, ಜುಲೈ 16: ಐದು ವರ್ಷ ನಾನೇ ಸಿಎಂ ಅಂತಾ ದೆಹಲಿಯಲ್ಲಿ ನಿಂತು ಹೊಸ ದಾಳ ಉರುಳಿಸಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲಿಜು.19ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸಾಧನಾ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗಿದೆ. ಹೀಗಾಗಿ ಪ್ರತಿ ಕ್ಷೇತ್ರದಿಂದ 6ರಿಂದ 8 ಸಾವಿರ ಜನರನ್ನ ಕರೆತರುವಂತೆ ಶಾಸಕರಿಗೆ ಸಿದ್ದರಾಮಯ್ಯ ಟಾಸ್ಕ್ ನೀಡಿದ್ದಾರೆ.
ಜು.19ರಂದು ಸಾಧನಾ ಸಮಾವೇಶ: ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ

ಮೈಸೂರಿನ ಸಾಧನಾ ಸಮಾವೇಶದಲ್ಲಿ 2,600 ಕೋಟಿ ರೂ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾವೇಶ ಮೂಲಕ ಹಳೇ ಮೈಸೂರು ಭಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಾವೇಶದ ಜವಾಬ್ದಾರಿಯನ್ನ ಸಿಎಂ ಸಿದ್ದರಾಮಯ್ಯ ಆಪ್ತರೂ ಆಗಿರುವ ಸಚಿವ ಡಾ.ಮಹದೇವಪ್ಪ ಹೆಗಲಿಗೆ ವಹಿಸಲಾಗಿದೆ.