ಬೆಂಗಳೂರು, (ಫೆಬ್ರವರಿ 07): ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರದಿಂದ ವಿಶ್ರಾಂತಿಯಲ್ಲಿದ್ದ ಸಿಎಂ ಸಿದ್ದರಾಮಯ್ಯ, ಬಜೆಟ್ ಕುರಿತ ಪೂರ್ವಸಿದ್ಧತಾ ಸಭೆಗಳನ್ನ ನಡೆಸಿದ್ದಾರೆ. ಫೆಬ್ರವರಿ.1ರಂದು ಕೇಂದ್ರ ಬಜೆಟ್ ಮಂಡನೆಯಾಗಿದೆ. ಇದೀಗ ಮಾರ್ಚ್ ಮೊದಲ ವಾರದಲ್ಲಿ ಸಿದ್ದರಾಮಯ್ಯ ಅವರು ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ನಿನ್ನೆ ಬೆಳಗ್ಗೆ 11 ಗಂಟೆಯಿಂದ ಸಂಜೆಯವರೆಗೂ ಇಡೀ ದಿನ ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ. ಆದ್ರೆ, ಬಜೆಟ್ ಮಂಡನೆಯಾವಾಗ ಎನ್ನುವುದೇ ಇನ್ನೂ ದಿನಾಂಕ ಫಿಕ್ಸ್ ಆಗಿಲ್ಲ. ಹೀಗಾಗಿ ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ದಿನಾಂಕ ನಿಗಧಿ ಮಾಡಲಿದ್ದಾರೆ.