ಬೆಂಗಳೂರು,ಮಾರ್ಚ್ 28: : ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕಳೆದ ಬಿಜೆಪಿ ಸರ್ಕ್ಲಾರದ ಅವಧಿಯಲ್ಲಿ ವಿಪಕ್ಷ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ 40% ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಜಾಹೀರಾತು ನೀಡಿದ್ದರು. ಈ ಬಗ್ಗೆ ಬಿಜೆಪಿ ಮನನಷ್ಟ ಕೇಸ್ ದಾಖಲಿಸಿತ್ತು. ಇದೀಗ ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಏಪ್ರಿಲ್ 29ರಂದು ಖುದ್ದು ಕೋರ್ಟ್ ಗೆ ಹಾಜರಾಗಬೇಕು ಹಾಗೂ ರಾಹುಲ್ ಗಾಂಧಿ ಜೂನ್ 1ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಲಾಗಿದೆ.