ಬೆಂಗಳೂರು: ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಹಾರಕ್ಕೆ ತೆರಳಿದರು. ಉತ್ತರ ಪ್ರದೇಶದ ಗೋರಖ್ ಪುರ ವಿಮಾನ ನಿಲ್ದಾಣದಲ್ಲಿ ಇಳಿದು ಅವರು ಬಿಹಾರದ ಗೋಪಾಲ್ ಗಂಜ್ ಗೆ ರಸ್ತೆ ಮಾರ್ಗವಾಗಿ ಪ್ರಯಾಣ ಬೆಳೆಸಿದರು.
ವಿಮಾನ ನಿಲ್ದಾಣದಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿದರು.
ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಡಾ. ಸುಧಾಕರ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜೊತೆಯಾಗಿದ್ದಾರೆ.