ಬೆಂಗಳೂರು, ಅಕ್ಟೋಬರ್ 29: 98-95 ವಯಸ್ಸು ಆಗಿರುವವರೂ ರಾಜಕೀಯದಲ್ಲಿ ಇದ್ದಾರೆ. ಹೀಗಾಗಿ 2028ರಲ್ಲಿ ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿದರೆ ತಪ್ಪೇನಿಲ್ಲ. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದ್ದು, ಅವರೇ ನಮ್ಮ ನಾಯಕರು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಣ್ಣ ಡಿ.ಕೆ. ಶಿವಕುಮಾರ್ರನ್ನ ಮುಖ್ಯಮಂತ್ರಿ ಮಾಡಬೇಕೆಂಬ ಆಸೆ ನನಗೂ ಇದೆ. ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗು9ತ್ತಾರೆ. ನವಂಬರ್ 15ರ ಕ್ರಾಂತಿ ಬಗ್ಗೆ ಮಾಹಿತಿ ಇಲ್ಲ.ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನೂ ಸಂತೋಷಪಡಿಸಲು ಆಗಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವು ಐದು ವರ್ಷಗಳ ಕಾಲ ಆಡಳಿತ ನಡೆಸಲು ಜನರಿಂದ ಬಹುಮತ ಪಡೆದಿದೆ. ಕಾಂಗ್ರೆಸ್ ಈಗ ಪಕ್ಷೇತರರು ಸೇರಿ 140 ಸ್ಥಾನಗಳನ್ನು ಹೊಂದಿದೆ. ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡುವುದು ಮತ್ತು ನೀಡಿದ ಭರವಸೆಗಳನ್ನು ಈಡೇರಿಸುವುದು ಪ್ರಮುಖವಾಗಿದೆ. ಪಕ್ಷ ಮತ್ತು ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ. ಆಡಳಿತದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಅವರು ತಿಳಿಸಿದರು.


