ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ತಿರುಗೇಟು ನೀಡಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್

Ravi Talawar
ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ತಿರುಗೇಟು ನೀಡಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 20: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್​​​ನಲ್ಲಿ ತಾತ್ಕಾಲಿಕ ರಿಲೀಫ್ ದೊರೆತಿದೆ. ಆದಾಗ್ಯೂ ಪ್ರಕರಣದಲ್ಲಿ ಸಿದ್ದರಾಮಯ್ಯ ನಿರಾಳ ಎನ್ನುವಂತಿಲ್ಲ. ಹೀಗಾಗಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ತಿರುಗೇಟು ನೀಡಲು ಅವರು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ರಾಜ್ಯಪಾಲರು ಕ್ಲಾಸಿಕ್ಯೂಷನ್ ಅನುಮತಿ ನೀಡಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೌಂಟರ್ ಕೊಡಲು ಅವರು ಸಿದ್ಧತೆ ನಡೆಸುತ್ತಿದ್ದಾರೆ.

ವಿವಿಧ ರಾಜ್ಯಗಳಲ್ಲಿ ರಾಜ್ಯಪಾಲರ ರಾಜಕೀಯ ಅನುಮತಿ ನೀಡಿರುವ ಮಾಹಿತಿ ಸಂಗ್ರಹಿಸುತ್ತಿರುವ ಅವರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದಲೂ ಸಲಹೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಲ್ಲ ರೀತಿಯಲ್ಲಿ ಮಾಹಿತಿ ಕಲೆಹಾಕಿದ ನಂತರ ಅವುಗಳನ್ನು ಕಾಂಗ್ರೆಸ್ ಹೈಕಮಾಂಡ್​ಗೆ ಸಿದ್ಧರಾಮಯ್ಯ ರವಾನಿಸಲಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಇದೇ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ. ಪ್ರಾಸಿಕ್ಯೂಷನ್ ಸಂಬಂಧಪಟ್ಟಂತೆ ವರಿಷ್ಠರಿಗೆ ಎಲ್ಲ ಮಾಹಿತಿ ನೀಡಲಿರುವ ಸಿದ್ಧರಾಮಯ್ಯ, ಕೇಂದ್ರದ ವಿರುದ್ಧ ಕಾನೂನು ಹೋರಾಟಕ್ಕೆ ವರಿಷ್ಠರ ಬಳಿ ಮಾಡುವ ಸಾಧ್ಯತೆ ಇದೆ.

WhatsApp Group Join Now
Telegram Group Join Now
Share This Article