ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ; ಹಲವೆಡೆ ಸಂಚಾರ ಅಸ್ತವ್ಯಸ್ತ

Ravi Talawar
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ; ಹಲವೆಡೆ ಸಂಚಾರ ಅಸ್ತವ್ಯಸ್ತ
WhatsApp Group Join Now
Telegram Group Join Now

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ 5.30 ರವರೆಗೆ 11 ಮಿ.ಮೀ ಮಳೆಯಾಗಿದ್ದು, ವರುಣನ ಆರ್ಭಟದಿಂದ ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 4.2 ಮಿ.ಮೀ ಮಳೆಯಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮಾಹಿತಿಗಳ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದಲ್ಲಿ 19.8 ಮಿ.ಮೀ ಮಳೆ ದಾಖಲಾಗಿದ್ದು, ಜಕ್ಕೂರಿನಲ್ಲಿ 17 ಮಿ.ಮೀ, ವಿದ್ಯಾರಣ್ಯಪುರದಲ್ಲಿ 15 ಮಿ.ಮೀ, ಬಾಣಸವಾಡಿಯಲ್ಲಿ 11.50 ಮಿ.ಮೀ, ಎಚ್‌ಎಎಲ್ ಹಳೆಯ ವಿಮಾನ ನಿಲ್ದಾಣದಲ್ಲಿ 11 ಮಿ.ಮೀ ಮತ್ತು ಹೊರಮಾವು 11 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ.

ಸಂಜೆ ವೇಳೆ ಸುರಿದ ಭಾರೀ ಮಳೆಯಿಂದಾಗಿ, ಹಲವಾರು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಯಿತು, ಇದರಿಂದಾಗಿ ವಾಹನಗಳು ನಿಧಾನವಾಗಿ ಚಲಿಸಿದವು. ಸಂಚಾರ ದಟ್ಟಣೆಯಿಂದಾಗಿ ನಗರಾದ್ಯಂತ ವಿದ್ಯಾರ್ಥಿಗಳು, ಮನೆಗೆ ಹೋಗುವವರು ತೀವ್ರ ಸಮಸ್ಯೆ ಎದುರಿಸಿದರು.

ಹಲವು ಅಂಡರ್‌ಪಾಸ್‌ಗಳಲ್ಲಿ ನೀರು ನಿಂತ ಪರಣಾಮ ವಾಹನ ಸಂಚಾರ ನಿಧಾನವಾಯಿತು. ತೀವ್ರ ಸಂಚಾರ ಅಡಚಣೆ ಉಂಟಾದ ಪ್ರದೇಶಗಳಿಗೆ ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಹಲವಾರು ಸಲಹೆಗಳನ್ನು ನೀಡಿದರು.

WhatsApp Group Join Now
Telegram Group Join Now
Share This Article