ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ! ಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ

Ravi Talawar
ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ! ಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ
WhatsApp Group Join Now
Telegram Group Join Now

ನವದೆಹಲಿ: ದೇಶಕಂಡ ಅಪರೂಪದ ರಾಜಕಾರಣಿ ಹಾಗೂ ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆದಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು.

ಮನಮೋಹನ್ ಸಿಂಗ್ ಅವರ ಪುತ್ರಿ ತಮ್ಮ ತಂದೆಯ ಚಿತೆಗೆ ಅಗ್ಮಿ ಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಈ ವೇಳೆ ಉಪಸ್ಥಿತರಿದ್ದ ನಾಯಕರು ಕಣ್ಣೀರು ಹಾಕುವ ಮೂಲಕ ಅವರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನವದೆಹಲಿಯ ಸ್ವಗೃಹದಿಂದ ಕಾಂಗ್ರೆಸ್‌ನ ಪ್ರಧಾನ ಕಚೇರಿಗೆ ಪಾರ್ಥಿವ ಶರೀರವನ್ನು ಕರೆ ತಂದ ಬಳಿಕ ಅಲ್ಲಿ ಅವರಿಗೆ ಅಂತಿಮ ಗೌರವ ಸಲ್ಲಿಸಲಾಯಿತು. ಆ ಬಳಿಕ ನಿಗಮಬೋಧ್ ಘಾಟ್‌ಗೆ ಅಂತಿಮ ಯಾತ್ರೆಯನ್ನು ಸಾವಿರಾರು ಮಂದಿಯ ಸಮ್ಮುಖದಲ್ಲಿ ಕರೆತರಲಾಯಿತು. ಪಾರ್ಥೀವ ಶರೀರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೆಗಲು ಕೊಟ್ಟರು.

ಮನಮೋಹನ್ ಸಿಂಗ್ ಅವರಿಗೆ ಅಂತಿಮ ವಿದಾಯ ಹೇಳಲು ದೆಹಲಿಯ ನಿಗಮಬೋಧ್ ಘಾಟ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ರಾಜ್ಯಗಳ ಸಿಎಂಗಳು ಸಹಿತ ಕೇಂದ್ರ ಸಚಿವರುಗಳು, ಕಾಂಗ್ರೆಸ್‌ ನಾಯಕರುಗಳು ಹಾಜರಿದ್ದರು. ಈ ಎಲ್ಲಾ ನಾಯಕರು ಅಗಲಿದ ನಾಯಕನಿಗೆ ಪುಷ್ಪ ನಮನ ಸಲ್ಲಿಸಿದರು.

WhatsApp Group Join Now
Telegram Group Join Now
Share This Article