ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೨೮೯ನೇ ಶಿವಾನುಭವ ಹಾಗೂ ಮೊದಲ ಶ್ರಾವಣ ಸೋಮವಾರದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಸೋಮವಾರ ದಿನಾಂಕ ೨೮ ಜುಲೈ ೨೦೨೫ರಂದು ಸಾಯಂಕಾಲ ೬ ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ ಅವರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ರಾಜ್ಯ ಸಂಯೋಜಕರಾದ ಶ್ರೀ ಮನೋಹರ ಮಠದ ಅವರು ಅವರು “ಭಾರತೀಯ ಸಂಸ್ಕೃತಿ ಹಾಗೂ ಹಬ್ಬಗಳ ಮಹತ್ವ” ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.