ಅಥಣಿ : ಇಲ್ಲಿನ ಜಾದವಜಿ ಶಿಕ್ಷಣ ಸಂಸ್ಥೆಯ ಕೆ. ಎ. ಲೋಕಾಪುರ ಪದವಿ ಮಹಾವಿದ್ಯಾಲಯದ ಎರಡು ದಶಕಗಳ ಪಯಣದ ಹಿಂದಿನ ವಿದ್ಯಾರ್ಥಿಗಳ ಸಮ್ಮಿಲನ ” ಸ್ಮೃತಿ ಸುಮನ -2026 ” ಕಾರ್ಯಕ್ರಮವನ್ನು ಬರುವ ಶನಿವಾರ ದಿ. 18 ರಂದು ಆಯೋಜಿಸಲಾಗಿದೆ ಎಂದು ಜೆ. ಇ ಶಿಕ್ಷಣ ಸಂಸ್ಥೆಯ ಕಾರ್ಯಧ್ಯಕ್ಷ ಡಾ. ರಾಮ ಬಿ ಕುಲಕರ್ಣಿ ಹೇಳಿದರು.
ಅವರು ಗುರುವಾರ ಪಟ್ಟಣದ ಕೆ. ಎ. ಲೋಕಾಪುರ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸ್ಮೃತಿ ಸುಮನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಾಧವಜಿ ಶಿಕ್ಷಣ ಸಂಸ್ಥೆಯು ಕೆಜಿ ಯಿಂದ ಪಿಜಿ ವರೆಗೆ ಕಳೆದ 108 ವರ್ಷಗಳಲ್ಲಿ ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿದೆ. ಶತಮಾನೋತ್ಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡ ಸಂಸ್ಥೆಯ ಅನೇಕ ಅಂಗಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿರುವುದು ನಮ್ಮೆಲ್ಲರಿಗೆ ಸಂತಸ. ಇತ್ತೀಚಿಗೆ ನಮ್ಮ ಶಿಕ್ಷಣ ಸಂಸ್ಥೆಯ ದ್ವಿತೀಯ ಪಿಯುಸಿ ಫಲಿತಾಂಶ ದಾಖಲೆಯನ್ನ ನಿರ್ಮಿಸಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ಎರಡನೇ ರಾಂಕ್ ಗಳಿಸಿರುವುದು ನಮ್ಮೆಲ್ಲರಿಗೆ ಹೆಮ್ಮೆ ಮತ್ತು ಸಂತೋಷ ತಂದಿದೆ. ಶ್ರೀ ಕೃಷ್ಣರಾವ್ ಅಣ್ಣಾರಾವ ಲೋಕಾಪುರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕಳೆದ 20 ವರ್ಷಗಳಿಂದ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದೆ. ಅತ್ಯಂತ ಕಡಿಮೆ ಶುಲ್ಕದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಅನೇಕ ವಿದ್ಯಾರ್ಥಿಗಳು ನಾಡಿನ ಮತ್ತು ದೇಶದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಎರಡು ದಶಕಗಳ ಪಯಣದ ಹಿಂದಿನ ವಿದ್ಯಾರ್ಥಿಗಳ ಸಮ್ಮೇಳನವನ್ನು ಬರುವ ದಿನಾಂಕ 18 ರಂದು ಹಮ್ಮಿಕೊಳ್ಳಲಾಗಿದೆ. ಮಹಾವಿದ್ಯಾಲಯದ ಹಿಂದಿನ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಮ್ಮಿಲನ ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ಮಹಾವಿದ್ಯಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಆರ್ ಎಸ್ ಎಸ್ ಮುಖಂಡ ಅರವಿಂದರಾವತ ದೇಶಪಾಂಡೆ ಮಾತನಾಡಿ ನಮ್ಮ ಜಾದವಜಿ ಶಿಕ್ಷಣ ಸಂಸ್ಥೆಯ ಲೋಕಾಪುರ ಮಹಾವಿದ್ಯಾಲಯದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಬರುವ ಅನಿಕ ಕೋರ್ಸ್ಗಳ ವ್ಯಾಸಂಗ ಸೌಲಭ್ಯ ಹೊಂದಿದೆ. ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಕೃಷಿಗೆ ಮತ್ತು ಉದ್ಯೋಗಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಇನ್ನಷ್ಟು ಕೋರ್ಸ್ ಗಳನ್ನು ಆರಂಭಿಸಲಾಗುವುದು. ನಮ್ಮ ಮಹಾವಿದ್ಯಾಲಯಕ್ಕೆ ನ್ಯಾಕ್ ಕಮಿಟಿಯಿಂದ A+ ಮಾನ್ಯತೆ ಪಡೆದುಕೊಂಡಿದೆ ಎಂದರು. ಕಳೆದ 20 ವರ್ಷಗಳಿಂದ ವ್ಯಾಸಂಗ ಮಾಡಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಚಿಂತನ ಮಂಥನ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸ್ಮೃತಿ ಸುಮ್ಮನ ಕಾರ್ಯಕ್ರಮ ದಿವ್ಯ ಸಾನಿಧ್ಯವನ್ನು ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯ ನಿರ್ಭಯಾನಂದ ಸ್ವಾಮೀಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೇಷ್ಠ ಶಿಕ್ಷಣ ಪದ್ಯ ಹಾಗೂ ಉದ್ಯಮಿ ಮಹೇಶ ಮಾಶಾಳ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸು. 3000ಕ್ಕೂ ಅಧಿಕ ಹಳೆಯ ವಿದ್ಯಾರ್ಥಿಗಳು ಸಮ್ಮಿಲನಗೊಳ್ಳಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸುಹಾಸ್ ದಾತಾರ, ಕಾರ್ಯದರ್ಶಿ ಆರ್ಎ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರಾದ ಎಸ್ಎಂ ಪಾಟೀಲ, ಎಸ್ ವಿ ಜೋಶಿ, ಡಾ. ಶ್ರೀವತ್ಸ್ ಕುಲಕರ್ಣಿ, ಡಾ. ವಿಜಯಕುಮಾರ್ ಚೈನಿ, ಹೃಷಿಕೇಶ್ ದೇಶಪಾಂಡೆ, ಹಿಂದಿನ ವಿದ್ಯಾರ್ಥಿಗಳಾದ ರವಿ ಬಡಕಂಬಿ, ಅಭಿನಂದನ್ ಪಡನಾಡ, ಶ್ರೀನಿವಾಸ ಪಟ್ಟಣ, ಪ್ರಾಚಾರ್ಯ ಆರ್ ಎಂ ದೇವರೆಡ್ಡಿ, ಆರ್. ಎ ನಾಯಿಕ, ಜಿ. ಎಂ ಕುಲಕರ್ಣಿ, ಎನ್ ಬಿ ಝರೆ, ಬಾಳೇಶ್ ಬೊಮನಾಳೆ, ಬಿ ವಿ ಗುಂಡಾ, ಯೋಗೇಶ್ ಕುಲಕರ್ಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


