ಮುಡಾ ಹಗರಣ ಹಗರಣ ಸಂಬಂಧ ಸ್ನೇಹಮಯಿ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ

Ravi Talawar
ಮುಡಾ ಹಗರಣ ಹಗರಣ ಸಂಬಂಧ ಸ್ನೇಹಮಯಿ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ
WhatsApp Group Join Now
Telegram Group Join Now

ಮೈಸೂರು, ಡಿಸೆಂಬರ್ 19: ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ. ಜತೆಗೆ, ಮುಡಾ ಅಕ್ರಮ ತನಿಖೆ ಮಾಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ಅದಕ್ಕೆ ಅರ್ಹರಲ್ಲ ಎಂದು ಪ್ರತಿಪಾದಿಸಿದ್ದಾರೆ. ಅದಕ್ಕೆ ಕಾರಣವೇನು ಎಂಬುದನ್ನೂ ಅವರು ಬಹಿರಂಗಪಡಿಸಿದ್ದಾರೆ.

ಪಿಎನ್ ದೇಸಾಯಿ ಒಪ್ಪಿದ್ದ ನಿಬಂಧನೆಗಳೇನು?

ನೇಮಕಾತಿ ಆದೇಶವನ್ನು ನಿರಾಕರಿಸದೇ ಇರುವುದು, ಆದೇಶ ಆದ 30 ದಿನಗಳ ಒಳಗಾಗಿ ಜವಾಬ್ದಾರಿ ಸ್ವೀಕರಿಸುವ ನಿಬಂಧನೆಗಳನ್ನು ಪಿಎನ್ ದೇಸಾಯಿ ಒಪ್ಪಿದ್ದರು. ಒಂದ ವೇಳೆ ನಿಬಂಧನೆಗಳನ್ನು ಉಲ್ಲಂಘಿಸಿದರೆ ಮೂರು ವರ್ಷಗಳ ಕಾಲ ಯಾವುದೇ ಆಯೋಗಕ್ಕೆ ನೇಮಕ ಮಾಡದಂತೆ ಡಿಬಾರ್ ಆಗಬಹುದು ಎಂಬ ನಿಬಂಧನೆಗೂ ಒಪ್ಪಿದ್ದರು. ಹೀಗಾಗಿ, ನಂತರದಲ್ಲಿ ಸಿಎಟಿ ಸದಸ್ಯತ್ವ ಒಪ್ಪದ ಕಾರಣ ಅವರನ್ನು ಮೂರು ವರ್ಷ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ ನೇಮಕ ಮಾಡದಂತೆ ಆದೇಶ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಈ ವಿಚಾರ ಸಂಬಂಧ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article