ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸಹಾಯವಾಣಿಗೆ ಇದುವರೆಗೂ 30 ಕ್ಕೂ ಹೆಚ್ಚು ಕರೆಗಳು

Ravi Talawar
ಪ್ರಜ್ವಲ್  ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸಹಾಯವಾಣಿಗೆ ಇದುವರೆಗೂ 30 ಕ್ಕೂ ಹೆಚ್ಚು ಕರೆಗಳು
WhatsApp Group Join Now
Telegram Group Join Now

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ದೂರು ನೀಡಲು ವಿಶೇಷ ತನಿಖಾ ತಂಡ ಆರಂಭಿಸಿದ್ದ ಸಹಾಯವಾಣಿಗೆ ಇದುವರೆಗೂ 30 ಕ್ಕೂ ಹೆಚ್ಚು ಕರೆಗಳು ಬಂದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಾರೆ ಎಂಬ ಉದ್ದೇಶದಿಂದ ಎಸ್‌ಐಟಿಗೆ ದೂರು ನೀಡಲು ಸಹಾಯವಾಣಿ (6360938947) ತೆರೆದಿದ್ದು, ಈ ಸಹಾಯವಾಣಿಗೆ ಇದೂವರೆಗೆ ಒಟ್ಟು 30 ಕ್ಕೂ ಹೆಚ್

ಇದುವರೆಗೂ ದೂರು ನೀಡದೆ ಇರುವ ಸಂತ್ರಸ್ತ ಮಹಿಳೆಯರು ಹೆಲ್ಪ್‌ಲೈನ್‌ಗೆ ಕರೆ ಮಾಡಿ ದೂರು ನೀಡಿದರೆ, ಅವರು ಹೇಳಿದ ಸ್ಥಳಕ್ಕೆ ತೆರಳಿ, ಮಾಹಿತಿ ಸಂಗ್ರಹಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ದವಿದ್ದಾರೆ. ಗುರುತು ಹಾಗೂ ಮಾಹಿತಿ ಗೌಪ್ಯತೆ ಕಾಪಾಡಲಾಗುತ್ತದೆ. ಇಲ್ಲವೇ ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ತನಿಖೆ ಕೂಡ ನಡೆಸಲಾಗುತ್ತಿದೆ. ಸಹಾಯವಾಣಿ ಮೂಲಕ ಎಸ್‌ಐಟಿ ಅಧಿಕಾರಿಗಳನ್ನು ಸಂಪರ್ಕಿಸಿರುವ ಸಂತ್ರಸ್ತೆಯರು ಯಾವೆಲ್ಲ ಆರೋಪ ಮಾಡಿದ್ದಾರೆ? ಏನೆಲ್ಲ ಹೇಳಿಕೆ ನೀಡಿದ್ದಾರೆ ಎಂಬುದು ಗೌಪ್ಯವಾಗಿದೆ. ಅಲ್ಲದೇ ಹೆಲ್ಪ್‌ಲೈನ್‌ ಮೂಲಕ ದಾಖಲಾಗುವ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸುವುದರಿಂದ ಪ್ರಜ್ವಲ್ ರೇವಣ್ಣ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ.

 

WhatsApp Group Join Now
Telegram Group Join Now
Share This Article