ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಶಿವರಾಜ್ ಸಿಂಗ್ ಚೌಹಾಣ್

Ravi Talawar
ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಶಿವರಾಜ್ ಸಿಂಗ್ ಚೌಹಾಣ್
WhatsApp Group Join Now
Telegram Group Join Now

ಬೆಂಗಳೂರು, ಜನವರಿ 18: ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಶುರುವಾಗಲಿದೆ. ಚುನಾವಣೆ ಮೂಲಕ ರಾಜ್ಯ ಬಿಜೆಪಿ  ಘಟಕ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​​ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕ ವಿಕಾಸಕ್ಕೆ ಆದ್ಯತೆ ಕೊಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಚುನಾವಣಾಧಿಕಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ಇನ್ನು, ಕರ್ನಾಟಕಕ್ಕೆ ಬರಬೇಕಾದ ಅನುದಾನ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಬರುತ್ತಿಲ್ಲ ಎಂಬ ರಾಜ್ಯ ಕಾಂಗ್ರೆಸ್​ ಮುಖಂಡರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಬಿಡುಗಡೆ ಮಾಡಿರುವ ಅನುದಾನ ಸದ್ಬಳಕೆಯಾಗಲಿ. ಅವರು ಅನುದಾನ ಕೇಳದಿದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಕೊಟ್ಟರೂ ಕರ್ನಾಟಕ ಸರ್ಕಾರ ಬಳಕೆ ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.

ಇನ್ನು, ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಶತಪ್ರಯತ್ನ ನಡೆಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಅವರ ಹೆಸರು ಕೂಡ ಕೇಳಿಬರುತ್ತಿದೆ.

ಹೊಸ ವರ್ಷದಂದು ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದ್ದ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿದ್ದರು. ಈ ಭೇಟಿಯ ವೇಳೆ ಕರ್ನಾಟಕದ ಭಿನ್ನಮತಕ್ಕೆ‌ ಬ್ರೇಕ್ ಹಾಕುವಂತೆ ಅಮಿತ್ ಶಾ ಅವರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
Share This Article