ಸಮಾರಂಭದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಸೊಲ್ಲಾಪುರದ ಶಿವಬಸವ ದೇವರು ಮಾತನಾಡಿ ಕ್ರೀಡೆಗಳು ಯುವಕರಲ್ಲಿ ಧನಾತ್ಮಕ ಮನೋಭಾವ ಮತ್ತು ಆತ್ಮ ವಿಶ್ವಾಸ ಬೆಳೆಸುವಲ್ಲಿ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವ ಪ್ರದರ್ಶಿಸಿ ಪರಸ್ಪರ ಸಹಬಾಳ್ವೆಯಿಂದ ಬದುಕಬೇಕು ಎಂದರು.
ವೇದಿಕೆಯ ಮೇಲೆ ನಿವೃತ್ತ ಕಾಲೇಜು ಪ್ರಾಧ್ಯಾಪಕ ಜಿ.ಎನ್. ಪಾಟೀಲ, ಜಿಲ್ಲಾ ಸಂಯೋಜಕ ಪಿ.ಡಿ. ಶಿವನಾಯ್ಕರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಜೆ. ಬಿ. ಪಟೇಲ್, ಕ್ಷೇತ್ರ ಸಮನ್ವಯ ಅಧಿಕಾರಿ ಐ. ಡಿ. ಹಿರೇಮಠ, ಸಂಯೋಜಕ ರಾಜಸೇಖರ ಪಾಟೀಲ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸಿದ್ದರಾಮೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಚಾರ್ಯೆ ಪೂಜಾ ನಾಯಕ ಸ್ವಾಗತಿಸಿದರು. ಶಿಕ್ಷಕಿ ಸ್ವಾತಿ ಪೂಜಾರ ನಿರೂಪಿಸಿದರು. ಕೊನೆಗೆ ಫಾತೀಮಾ ಉಸ್ತಾದ್ ವಂದಿಸಿದರು.