ಬಳ್ಳಾರಿ,ಆ.06 ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ಬಳ್ಳಾರಿ ತಾಲ್ಲೂಕಿನ ಬೆಳಗಲ್ ಗ್ರಾಮದ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ಶ್ರಾವಣ 3ನೇ ಶನಿವಾರವಾದ ಆಗಸ್ಟ್ 09 ರಂದು ಸಂಜೆ 05.15 ಗಂಟೆಗೆ ನಡೆಯಲಿದೆ.
ಸಾರ್ವಜನಿಕರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಕೋರಿದ್ದಾರೆ.
ಆ.09 ರಂದು ಶ್ರೀ ಆಂಜನೇಯ ಸ್ವಾಮಿ ರಥೋತ್ಸವ
