ಶ್ರೀಲಂಕಾ ಚಂಡಮಾರುತ; ಸಾವಿನ ಸಂಖ್ಯೆ 200ಕ್ಕೂ ಹೆಚ್ಚು

Ravi Talawar
ಶ್ರೀಲಂಕಾ ಚಂಡಮಾರುತ; ಸಾವಿನ ಸಂಖ್ಯೆ 200ಕ್ಕೂ ಹೆಚ್ಚು
WhatsApp Group Join Now
Telegram Group Join Now

ಕೊಲಂಬೋ, ನವೆಂಬರ್ 30: ಶ್ರೀಲಂಕಾ ದೇಶವು ದಿತ್ವಾ ಚಂಡಮಾರುತದ ಅಬ್ಬರಕ್ಕೆ ಅಕ್ಷರಶಃ ನಲುಗಿ ಹೋಗಿದೆ. ಈ ಭೀಕರ ಸೈಕ್ಲೋನ್​ಗೆ ಬಲಿಯಾದವರ ಸಂಖ್ಯೆ 200 ದಾಟಿದೆ. ಒಂದು ವರದಿ ಪ್ರಕಾರ ಸಾವಿನ ಸಂಖ್ಯೆ 218ಕ್ಕಿಂತ ಹೆಚ್ಚಾಗಿದೆ. ಸುಮಾರು 200-250 ಮಂದಿ ಕಾಣೆಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಭಾರೀ ಮಳೆ, ಗಾಳಿ, ಪ್ರವಾಹ, ಭೂಕುಸಿತಗಳು ಸಂಭವಿಸುತ್ತಲೇ ಇದ್ದು, ಲಕ್ಷಾಂತರ ಮನೆಗಳು ಮತ್ತು ಕುಟುಂಬಗಳು ಬಾಧಿಗೊಂಡಿವೆ. ಶ್ರೀಲಂಕಾ ಸರ್ಕಾರವು ರಾಷ್ಟ್ರೀಯ ತುರ್ತುಸ್ಥಿತಿ ಎಂದು ಘೋಷಿಸಿ, ಸಕಲ ರಕ್ಷಣಾ ಕಾರ್ಯಾಚರಣೆಗಳನ್ನು  ಕೈಗೊಂಡಿದೆ. ಶ್ರೀಲಂಕಾಗೆ ಭಾರತವೂ ಕೂಡ ನೆರವಿನ ಹಸ್ತ ಚಾಚಿದೆ. ರಕ್ಷಣಾ ಕಾರ್ಯದಲ್ಲಿ ಭಾರತೀಯ ವಾಯುಪಡೆಯೂ ಕೈಜೋಡಿಸಿದೆ.

WhatsApp Group Join Now
Telegram Group Join Now
Share This Article