ಬಳ್ಳಾರಿ:12.. ನಗರದ ಸತ್ಯನಾರಾಯಣ ಪೇಟೆ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠದಲ್ಲಿ ಗುರುಪೂರ್ಣಿಮೆ ನಿಮಿತ್ತ ಗುರುವಾರ ಶ್ರೀಮಠದ ಆಡಳಿತಾಧಿಕಾರಿ ಪಂ.ಶ್ರೀ ಪ್ರಸನ್ನಾಚಾರ ಅವರ ನೇತೃತ್ವದಲ್ಲಿ ವಿವಿಧ ಪೂಜೆಗಳು ವಿಜೃಂಭಣೆಯಿಂದ ನೆರವೇರಿದವು. ಬೆಳಿಗ್ಗೆ ಶ್ರೀಮಠದಲ್ಲಿ ಶ್ರೀರಾಘವೇಂದ್ರ ಸ್ತೋತ್ರ ಅಷ್ಟೋತ್ತರ ಪಾರಾಯಣ, ಗುರುರಾಯರಿಗೆ ವಿಶೇಷ ಅಲಂಕಾರ, ಮಹಾ ನೈವೇದ್ಯ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಗುರುಪೂರ್ಣಿಮೆ ಹಿನ್ನೆಲೆ ಇಡಿ ದೇವಾಲಯವನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು. ಸಂಜೆ ರಥೋತ್ಸವ ಸಾವಿರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ನಡೆಯಿತು. ವಿವಿದ ಭಜನಾ ಮಂಡಳಿ ಸದಸ್ಯರಿಂದ ಸಮೋಹಿಕ ಭಜನೆ, ಮಕ್ಕಳಿಂದ ಕೋಲಾಟ ಗಮನಸೆಳೆಯಿತು. ಭಕ್ತರಿಗೆ ತೀರ್ಥ, ಪ್ರಸಾದ ವಿತರಿಸಲಾಯಿತು.