ಪಕ್ಷ ತೊರೆಯುವ ಮಾತುಗಳನ್ನಾಡಿದ ಶ್ರೀರಾಮುಲು

Ravi Talawar
ಪಕ್ಷ ತೊರೆಯುವ ಮಾತುಗಳನ್ನಾಡಿದ ಶ್ರೀರಾಮುಲು
WhatsApp Group Join Now
Telegram Group Join Now

ಬೆಂಗಳೂರು, (ಜನವರಿ 22): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ರಾಧಾ ಮೋಹನ್ ದಾಸ್ ಸರಣಿ ಸಭೆ ನಡೆಸಿದ್ದಾರೆ. ನಿನ್ನೆ(ಜನವರಿ 21) ಕೋರ್ ಕಮಿಟಿ ಸಭೆಗೂ ಮುನ್ನ ಶಾಸಕರು, ಸಂಸದರು, ಪರಿಷತ್ ಸದಸ್ಯರು, ವೀಕ್ಷಕರು ಜೊತೆ ಸಭೆ ನಡೆಸಿದರು. ಬಳಿಕ ಸಂಜೆ ಕೋರ್‌ ಕಮಿಟಿ ಸಭೆಯೂ ನಡೆದಿದ್ದು, ಈ ಸಭೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಉಸ್ತುವಾರಿ ರಾಧಾ ಮೋಹನ್ ದಾಸ್ ವಿರುದ್ಧ ಕೆಂಡಾಮಂಡಲರಾಗಿದ್ದು, ಪಕ್ಷ ತೊರೆಯುವ ಮಾತುಗಳನ್ನಾಡಿದ್ದಾರೆ. ಅಲ್ಲದೇ ದೂರವಾಣಿ ಮೂಲಕ ಹೈಕಮಾಂಡ್ ನಾಯಕರಿಗೆ ದೂರು ನೀಡಿದ್ದಾರೆ.

ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು ಈ ವೇಳೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಬಿ.ಶ್ರೀರಾಮುಲು ಮೇಲೆಯೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಗಂಭೀರ ಆರೋಪ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಶ್ರೀರಾಮುಲು ಕೆಲಸ ಮಾಡಿಲ್ಲ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಸಭೆಯಲ್ಲೇ ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
Share This Article