ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆ

Ravi Talawar
ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆ
WhatsApp Group Join Now
Telegram Group Join Now

ಬೆಂಗಳೂರು, ಮೇ 02: 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.62.34ರಷ್ಟು ಫಲಿತಾಂಶ ಅಂದರೆ ಕಳೆದ ವರ್ಷಕ್ಕಿಂತ 8% ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ  ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶೇ.91.12 ರಷ್ಟು ಫಲಿತಾಂಶ ಗಳಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ42.43 ರಷ್ಟು ಫಲಿತಾಂಶ ಗಳಿಸುವ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಇನ್ನು ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಪಡೆದು ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿದ್ದಾರೆ. 8 ಲಕ್ಷ ವಿದ್ಯಾರ್ಥಿಗಳ ಪೈಕಿ, 5 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾ 74ರಷ್ಟು ಬಾಲಕಿಯರು ಪಾಸಾಗಿದ್ದಾರೆ.
WhatsApp Group Join Now
Telegram Group Join Now
Share This Article