ಎಸ್ಎಸ್ಎಲ್ಸಿ  ಮರು ಮೌಲ್ಯಮಾಪನ ಫಲಿತಾಂಶ: ಮತ್ತೊಬ್ಬ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ

Ravi Talawar
ಎಸ್ಎಸ್ಎಲ್ಸಿ  ಮರು ಮೌಲ್ಯಮಾಪನ ಫಲಿತಾಂಶ: ಮತ್ತೊಬ್ಬ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ
WhatsApp Group Join Now
Telegram Group Join Now

ಬೆಂಗಳೂರು, ಜೂನ್ 5: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2023-24ನೇ ಸಾಲಿನ ಎಸ್ಎಸ್ಎಲ್ಸಿ  ಮರು ಮೌಲ್ಯಮಾಪನ ಫಲಿತಾಂಶ  ಪ್ರಕಟಸಿದ್ದು, ಪರೀಕ್ಷೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿ ಬಿಎನ್ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಭಾವನಾ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಹಿಂದೆ ಪ್ರಕಟಿಸಿದ್ದ ಫಲಿತಾಂಶದಲ್ಲಿ ಭಾವನಾ 620 ಅಂಕ ಪಡೆದಿದ್ದರು. ಆದರೆ ಮರುಮೌಲ್ಯ ಮಾಪನದ ಬಳಿಕ 625-625 ಅಂಕ‌ ಪಡೆದುಕೊಂಡಿದ್ದಾರೆ.

ಈ ಹಿಂದೆ ಪರೀಕ್ಷೆಯಲ್ಲಿ ಬಾಗಲಕೋಟೆತ ಅಂಕಿತಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅಭಿನಂದನೆ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ ವಿದ್ಯಾರ್ಥಿನಿ ಫಸ್ಟ್ ರ‍್ಯಾಂಕ್‌ ಪಟ್ಟ ಅಲಂಕರಿಸಿದ್ದಾರೆ.

ಮೈಸೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಎರಡನೇ ಸ್ಥಾನ 

ಇನ್ನು ಮರು ಮೌಲ್ಯಮಾಪನದಲ್ಲಿ ಮೈಸೂರಿನ ವಿಜಯ ವಿಠ್ಠಲ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುದೀಕ್ಷ ಎಂ.ಡಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಮೌಲ್ಯಮಾಪಕರ ಎಡವಟ್ಟಿನಿಂದ ಮೊದಲ ಫಲಿತಾಂಶದಲ್ಲಿ 620 ಅಂಕ ಪಡೆಕೊಂಡಿದ್ದರು. ಬಳಿಕ ಮರು ಮೌಲ್ಯಮಾಪನದಲ್ಲಿ 620 ರಿಂದ 624 ಅಂಕ ಪಡೆದುಕೊಂಡಿದ್ದಾರೆ.

ಸುದೀಕ್ಷ ಮೈಸೂರಿನ ದಿನೇಶ್ ಎಂಬುವವರ ಪುತ್ರಿ ಆಗಿದ್ದು, ಕನ್ನಡ ಸೇರಿ 5 ವಿಷಯದಲ್ಲಿ ಶೇ 100ರಷ್ಟು ಅಂಕ ಗಳಿಸಿದ್ದಾರೆ. ಸಂಸ್ಕೃತ-125, ಇಂಗ್ಲಿಷ್-100, ಕನ್ನಡ-100, ವಿಜ್ಞಾನ-100, ಸಮಾಜ-100, ಗಣಿತದಲ್ಲಿ 95 ಅಂಕ ಬಂದಿತ್ತು.

ನಂತರ ಮರುಮೌಲ್ಯ ಮಾಪನಕ್ಕೆ‌ ಮನವಿ ಸಲ್ಲಿಸಲಾಗಿತ್ತು. ಇಂದು ಮರು ಮೌಲ್ಯ ಮಾಪನದ ಫಲಿತಾಂಶದಲ್ಲಿ ಗಣಿತದಲ್ಲಿ 99 ಅಂಕ ಪಡೆದುಕೊಂಡಿದ್ದಾರೆ. ಆ ಮೂಲಕ ಒಟ್ಟು 625ಕ್ಕೆ 624 ಅಂಕ ಗಳಿಸುವ ಮೂಲಕ ಮೈಸೂರು ಜಿಲ್ಲೆಗೆ ಟಾಪರ್ ಹಾಗೂ ರಾಜ್ಯಕ್ಕೆ ಎರಡನೇ ಸ್ಥಾನ‌ ಪಡೆದುಕೊಂಡಿದ್ದಾರೆ

WhatsApp Group Join Now
Telegram Group Join Now
Share This Article