ಬೆಂಗಳೂರು, ಮಾರ್ಚ್ 5: ಕ್ರೀಡಾಂಗಣಗಳನ್ನು ಅನುಮತಿ ಇಲ್ಲದೆ ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ. ಅಥವಾ ಇತರೆ ರೀತಿಯಲ್ಲಿ ಕ್ರೀಡಾಂಗಣಗಳನ್ನು ಪರಭಾರೆ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಆದೇಶಿಸಿದೆ. ಈ ಸಂಬಂಧ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರದ ಆದೇಶದನ್ವಯ ಕ್ರೀಡಾಂಗಣ ಬಳಕೆ ನೀತಿಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಉಲ್ಲೇಖಿಸಿದೆ.
ಸರ್ಕಾರದ ಆದೇಶದನ್ವಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣ ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕ್ರೀಡಾಂಗಣಗಳ ದೈನಂದಿನ ನಿರ್ವಹಣೆಗೆ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದ್ದು, ಸಾಮಾನ್ಯ ಮಾರ್ಗಸೂಚಿಗಳ ಕುರಿತು ಗಮನ ಸೆಳೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.