ಡೆಂಗ್ಯೂ ಪರೀಕ್ಷೆಗೆ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರ

Ravi Talawar
ಡೆಂಗ್ಯೂ ಪರೀಕ್ಷೆಗೆ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರ
WhatsApp Group Join Now
Telegram Group Join Now

ಬೆಂಗಳೂರು, ಜು.03: ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳ ಆಗುತ್ತಿದ್ದುಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದೆ. ಅದರಂತೆ ಜನವರಿಯಿಂದ ಜುಲೈ 1 ರ ತನಕ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. ಈ ವರ್ಷ 47% ಟೆಸ್ಟಿಂಗ್ ರೇಟ್ ಕೂಡ ಹೆಚ್ಚಳ ಮಾಡಲಾಗಿದೆ. ಇನ್ನೂ ಡೆಂಗ್ಯೂ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಕುರಿತು  ಸಿಎಂ ಕೂಡ ಎಚ್ಚರಿಕೆ ವಹಿಸಲು ತಿಳಿಸಿದ್ದಾರೆ. ಈ ಹಿನ್ನಲೆ ಡೆಂಗ್ಯೂ ಟೆಸ್ಟಿಂಗ್​ ಗೆ ಹೆಚ್ಚಿನ ಬೆಲೆ ವಿಧಿಸುತ್ತಿದ್ದ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿ, 600 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  • NS1 ಪರೀಕ್ಷೆಗೆ 300 ರೂಪಾಯಿ ನಿಗದಿ.
  • IgM ಪರೀಕ್ಷೆಗೆ 300 ರೂ. ನಿಗದಿ.
  • ಸ್ಕ್ರೀನಿಂಗ್ ಪರೀಕ್ಷೆ, ಱಪಿಡ್ ಕಾರ್ಡ್ ಟೆಸ್ಟ್ ಹಾಗೂ IgG ಟೆಸ್ಟ್‌ಗೆ 250 ರೂಪಾಯಿ ದರ ನಿಗದಿ.

ಇನ್ನು 2016ರಲ್ಲಿ ನಿಗದಿಯಾಗಿದ್ದ ದರಗಳನ್ನು ಪರಿಷ್ಕರಣೆ ಮಾಡಿ ಈ ಆದೇಶ ಹೊರಡಿಸಲಾಗಿದ್ದು, ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಲ್ಯಾಬ್‌ಗಳಿಗೆ ಈ ದರ ಅನ್ವಯವಾಗುತ್ತದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಡೆಂಗ್ಯೂ ಹರಡುವಿಕೆ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿ, ಅದರ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ.  ಸದಾ ಮಳೆ ಬರುತ್ತಿದ್ದರೆ, ಡೆಂಗ್ಯೂ ಸೊಳ್ಳೆ ಬರೋದಿಲ್ಲ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ. ಇದು ಅನುಕೂಲ ಮಾಡಿಕೊಡುತ್ತದೆ. ಈ ರೀತಿಯ ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ. ಇನ್ನು ಕೆಪಿಎಂ ಆ್ಯಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯವಾಗಿದೆ. ಇಷ್ಟೇ ಅಲ್ಲದೆ ರಾಜ್ಯದಲ್ಲಿ ಮತ್ತಷ್ಟು ಕೇಸ್​ಗಳು ಇರಬಹುದು, ಈ ಕುರಿತು ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು

WhatsApp Group Join Now
Telegram Group Join Now
Share This Article