ಡಿಸೇಂಬರ್ 14 ರಂದು ಕೊಪ್ಪಳದಲ್ಲಿ ರಾಜ್ಯ ಮಟ್ಟದ ಚೆಸ್‌ ಸ್ಪರ್ಧೆ: ರಾಮಸ್ವರೂಪ

Ravi Talawar
ಡಿಸೇಂಬರ್ 14 ರಂದು ಕೊಪ್ಪಳದಲ್ಲಿ ರಾಜ್ಯ ಮಟ್ಟದ ಚೆಸ್‌ ಸ್ಪರ್ಧೆ: ರಾಮಸ್ವರೂಪ
WhatsApp Group Join Now
Telegram Group Join Now
ಕೊಪ್ಪಳ : ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಡಿಸೇಂಬರ್ 14 ರಂದು ರಾಜ್ಯ ಮಟ್ಟದ ಚೆಸ್‌ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದ್ದು, ಆಸಕ್ತ ಚೆಸ್ ಸ್ಪರ್ಧಿಗಳು ಕೂಡಲೇ ಹೆಸರು ನೋಂದಾಯಿಸಿ ಪಂದ್ಯಾವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು.
ವಿಶ್ವ ಚೆಸ್ ಅಕಾಡೆಮಿ (ರೀ) ಮತ್ತು ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ   ಡಿಸೇಂಬರ್ 14 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಚೆಸ್ ಸ್ಪರ್ಧೆ ನಡೆಯಲಿದೆ ಎಂದು ವಿಶ್ವ ಚೆಸ್ ಅಕಾಡೆಮಿ ಅಧ್ಯಕ್ಷ ರಾಮಸ್ವರೂಪ ಕಾಂಬಳೆಕರ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಕೊಪ್ಪಳದಲ್ಲಿ ರಾಜ್ಯ ಮಟ್ಟದ ಚೆಸ್ ಸ್ಪರ್ಧೆ ಆಯೋಜಿಸಲಾಗಿದೆ.   ರಾಜ್ಯದ ಎಲ್ಲ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗಬಹಿಸಬಹುದು. ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಭಾಗದ ಪ್ರತಿಭಾವಂತ ಚೆಸ್ ಸ್ಪರ್ಧೆಗಳಿಗೆ ಸುವರ್ಣಾವಕಾಶ ಕಲ್ಪಿಸಲಾಗಿದೆ ಎಂದರು.
ಸ್ಪರ್ಧೆಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈನ್ ನಲ್ಲಿ ಹೆಸರು ನೊಂದಯಿಸಬಹುದು. KSCA Event Code:-KSCA/KSCA/G166/2526 ರಲ್ಲಿ ಹೆಸರು
ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಈ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಚೆಸ್ ಆಟವನ್ನು ಅಭಿವೃದ್ಧಿಪಡಿಸುವುದು ಹಾಗೂ ಬಲಪಡಿಸುವುದು, ಆಟಗಾರರಿಗೆ ಒಳ್ಳೆಯ ಅವಕಾಶ ಒದಗಿಸಿಕೊಟ್ಟು ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದೇ ಈ ಪಂದ್ಯಾವಳಿಯ ಉದ್ದೇಶವಾಗಿದೆ ಎಂದರು.ಈ ಸಂಧರ್ಭದಲ್ಲಿ ಕಾರ್ಯದರ್ಶಿ ಅಂಬುಜಾ ಕಾಂಬಳೆಕರ, ಖಜಾಂಚಿ ಕಾವ್ಯ ಕುರ್ಡೇಕರ್, ಸಹಾಯಕರಾದ ವಸಂತ ಕುರ್ಡೇಕರ್ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article