ಧಾರವಾಡ: ವಯೋಮಿತಿ ಹೆಚ್ಚಳ ಮಾಡಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ವತಿಯಿಂದ ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಪಿಎಸ್‌ಐ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಅನೇಕ ವರ್ಷಗಳಿಂದ ಭರ್ತಿ ಮಾಡಿಕೊಂಡಿಲ್ಲ. ಕೂಡಲೇ ರಾಜ್ಯ ಸರ್ಕಾರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ ಸಂಘಗಳ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಕೋಚಿಂಗ್ ಸೆಂಟರ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳು ದೀರ್ಘಕಾಲದಿಂದ ತೀವ್ರ ತೊಂದರೆಗಳನ್ನು ಅನುಭವಿಸುತ್ತಿವೆ. ಕಳೆದ ಹಲವು ವರ್ಷಗಳಿಂದ ಅನೇಕ ಇಲಾಖೆಗಳ ನೇಮಕಾತಿ ನಡೆಯದ ಕಾರಣ ವಿದ್ಯಾರ್ಥಿಗಳು ವಯೋಮಿತಿಯನ್ನು ಮೀರಿದ್ದಾರೆ ಎಂದು ಆಗ್ರಹಿಸಿದರು.
ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಸಾವಿರಾರು ಜನ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಹ ಭೇಟಿ ನೀಡಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು.
ಜ್ಯುಬಿಲಿ ವೃತ್ತದಲ್ಲಿ ಸುಮಾರು ಎರಡೂ ತಾಸಿಗೂ ಹೆಚ್ಚು ಕಾಲ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರಿಂದ ಧಾರವಾಡದ
ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.


