ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮ

MK HasiruKranti
ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಕ್ರಮ
WhatsApp Group Join Now
Telegram Group Join Now
ಬಳ್ಳಾರಿ, ಮಾ.27.: ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ವತಿಯಿಂದ ” ಐದು ದಿನದ ವಿದ್ಯಾರ್ಥಿ ಅಭಿವೃದ್ದಿ ಕಾರ್ಯಕ್ರಮವನ್ನು ದಿನಾಂಕ: 25-03-2026 ರಂದು ಬೆಳಗ್ಗೆ 10:00 ಗಂಟೆಗೆ  ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಶ್ರೀಮತಿ ಸೀಮಾ .ಇವರು ಮಾತನಾಡುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ  VLSI & Semiconductor    ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ನೆಟ್ವಿರ್ಕಿಂಗ್  ಅವಕಾಶಗಳು, ಸಂಶೋಧನೆಗೆ ಸಿಗುವ ಅವಕಾಶಗಳು, ವೃತ್ತಿಪರ ಅಬಿವೃದ್ಧಿ ಹಾಗೂ ಅತ್ಯಾಧುನಿಕ ಸಂಶೋದನೆಗೆ ಅದರ ಸಾರ್ಥಕವಾದ ಸದ್ಬಳಕೆಯಿಂದ ಆಗುವ ಉಪಯೋಗಗಳನ್ನು ತಿಳಿಸಿದರು.
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ|| ಪ್ರಭಾವತಿ .ಎಸ್ ಸಭೆಯನ್ನು ಸ್ವಾಗತಿಸಿದರು ಮತ್ತು ಕಾರ್ಯಕ್ರಮದ ಉದ್ದೇಶವನ್ನು ಕುರಿತು ಮಾತನಾಡಿದರು. ಅಸೋಸಿಯೇಟ್ ಪ್ರೊಫೆಸರ್ ಡಾ|| ಚಿನ್ನಾ .ವಿ. ಗೌಡರ್ ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಭೋಧಕ, ಭೋಧಕೇತರರ ಸಿಬ್ಬಂದಿ ವರ್ಗ, ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಮತ್ತು ಶ್ರೀಮತಿ ವಾಣೀ ಹೆಚ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಪ್ರಾಂಶುಪಾಲರಾದ ಡಾ|| ರಾಜಶೇಖರನ್ ಷನ್ಮುಗಮ್ ಮತ್ತು ಉಪಪ್ರಾಂಶುಪಾಲರಾದ ಡಾ|| ಸವಿತ ಸೊನೊಳಿ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article