ರಿಯಾಯಿತಿ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಟ!

Ravi Talawar
ರಿಯಾಯಿತಿ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಟ!
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ದರದ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಬಿಎಂಟಿಸಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವು ವಿದ್ಯಾರ್ಥಿಗಳು ವಿದ್ಯಾಸಂಸ್ಥೆಗಳಿಂದ ಅನುಮೋದನೆ ಪಡೆದಿದ್ದರೂ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಒಟಿಪಿ ಬರದಿರುವುದು ಕಾರಣವಾಗುತ್ತಿದೆ ಎಂದು ದೂರಿದ್ದಾರೆ. ಈ ಸಮಸ್ಯೆ ವಿದ್ಯಾರ್ಥಿನಿಯರಿಗೆ ಎದುರಾಗುತ್ತಿಲ್ಲ. ಇದಕ್ಕೆ ಕಾರಣ ಶಕ್ತಿ ಯೋಜನೆಯಾಗಿದೆ.

ಯೋಜನೆಯಡಿಯಲ್ಲಿ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್ ಬಳಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.

2023-24ಕ್ಕೆ ನೀಡಲಾದ ಬಸ್ ಪಾಸ್ ಮೇ 31 ರಂದು ಮುಕ್ತಾಯಗೊಂಡಿದೆ. ಕಳೆದ ವರ್ಷ, ನಾವು ಬಸ್ ಪಾಸ್ ಪಡೆಯುವವರೆಗೆ ಕಾಲೇಜು ಪ್ರವೇಶ ರಶೀದಿ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ, ಈ ವರ್ಷ ಆ ಆಯ್ಕೆಯನ್ನು ನೀಡದೆ ಬಸ್‌ ಪಾಸ್‌ ಪಡೆಯಬೇಕು ಅಥವಾ ಟಿಕೆಟ್‌ ಖರೀದಿಸಬೇಕು ಎಂದು ಹೇಳುತ್ತಿದ್ದಾರೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article