ಕಾಗವಾಡ :ಸ್ಥಳೀಯ ಶಿವಾನಂದ ಮಹಾವಿದ್ಯಾಲಯದ ಕಾಗವಾಡದಲ್ಲಿ ಐಕ್ಯೂಎಸಿ ಪ್ರಾಯೋಜಿತ ವಾಣಿಜ್ಯ ವಿಭಾಗದ ವತಿಯಿಂದ ಬಿ.ಕಾಂ-೧ ವರ್ಷಕ್ಕೆ ನೂತನವಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗಾಗಿ ಪರಿಚಯಾತ್ಮಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಪ್ರೊ.ಬಿ.ಎ.ಪಾಟೀಲ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಮಹತ್ವವನ್ನು ತಿಳಿಸಿದರು.
ವಿದ್ಯಾರ್ಥಿಗಳು ಏಕಾಗ್ರತೆಯಿಂದ ಶ್ರಮ ವಹಿಸಿ ಸಾಧನೆ ಮಾಡಬೇಕು. ಶಿಸ್ತು, ಸಮಯ ಪ್ರಜ್ಞೆಯನ್ನು ಪಾಲಿಸಬೇಕು ಎಂದರು. ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಮಹಾವಿದ್ಯಾಲಯದ ಆಡಳಿತಾಧಿಕಾರಿಗಳಾದ ಮೇಜರ್.ವ್ಹಿ.ಎಸ್.ತುಗಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಜೀವನದಲ್ಲಿ ಶಿಸ್ತು ಮುಖ್ಯ. ಶಿಸ್ತು ನಮ್ಮನ್ನು ಪ್ರಭಾವಿ ವ್ಯಕ್ತಿಯನ್ನಾಗಿಸುತ್ತದೆ. ಮಹಾವಿದ್ಯಾಲಯದ ಪ್ರಾಧ್ಯಾಪಕರು ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಸ್.ಪಿ.ತಳವಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯ, ಒಳಕ್ರೀಡಾಂಗಣ, ಕಂಪ್ಯೂಟರ್ ಲ್ಯಾಬ, ಭಾಷಾ ಪ್ರಯೋಗಾಲಯ ಹಾಗೂ ಇನ್ನಿತರ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ತಮ್ಮ ವ್ಯಕ್ತಿತ್ವದ ಸರ್ವಾಂಗೀಣ ಬೆಳವಣಿಗೆ ಮಾಡಿಕೊಳ್ಳಬೇಕೆಂದು ಹೇಳಿದರು.
ಐಕ್ಯೂಎಸಿ ಸಂಯೋಜಕರಾದ ಪ್ರೊ.ಬಿ.ಡಿ.ಧಾಮಣ್ಣವರ ಸಂಸ್ಥೆಯ ಗುರಿ ಉದ್ದೇಶಗಳನ್ನು ಪರಿಚಯಿಸಿದರು. ಪ್ರೊ.ಎಸ್.ಎಂ.ಘೋರರ್ಪಡೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳಾದ ಪ್ರೊ.ಜೆ.ಕೆ.ಪಾಟೀಲ ಮಹಾವಿದ್ಯಾಲಯದ ನಿಯಮಗಳ ಬಗ್ಗೆ ನೂತನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರಾರಂಭದಲ್ಲಿ ಕು. ಪ್ರತಿಕ್ಷಾ ಕೊತ್ತಲಗೆ ಸ್ವಾಗತ ಗೀತೆ ಹಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ.ವ್ಹಿ.ಬಿ.ಬುರ್ಲೆ ಸ್ವಾಗತಿಸಿದರು. ಪ್ರೊ.ಎಸ್.ಎಸ್.ಫಡತರೆ ಮನರಂಜನಾ ಕಾರ್ಯಕ್ರಮ ನಡೆಸಿದರು. ಪ್ರೊ.ವಿ.ವಿ.ಪಾಟೀಲ ವಂದಿಸಿದರು. ಕು. ಮಹೇಕ ಅಪರಾಜ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಾಣಿಜ್ಯ ವಿಭಾಗದ ಎಲ್ಲ ವಿದ್ಯಾರ್ಥಿಗಳು ಹಾಜರಿದ್ದರು.