ಪಿ.ಯು.ಕಾಲೇಜ್ ಉಪನ್ಯಾಸಕರ ಬೇಡಿಕೆಗಳ ಮನವಿ ಪತ್ರ ಸಲ್ಲಿಕೆ 

A B
By A B
ಪಿ.ಯು.ಕಾಲೇಜ್ ಉಪನ್ಯಾಸಕರ ಬೇಡಿಕೆಗಳ ಮನವಿ ಪತ್ರ ಸಲ್ಲಿಕೆ 
WhatsApp Group Join Now
Telegram Group Join Now
ಬಳ್ಳಾರಿ, ಮಾ.14: ಬಳ್ಳಾರಿಯಲ್ಲಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಬಳ್ಳಾರಿ ಜಿಲ್ಲಾ ಪ್ರಾಂಶುಪಾಲರ ಸಂಘದ ವತಿಯಿಂದ ಪದವಿ ಪೂರ್ವ ಉಪನ್ಯಾಸಕರ ಹಲವಾರು ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರಕ್ಕೆ ತಲುಪಿಸಲು ಬಳ್ಳಾರಿ ಜಿಲ್ಲಾ ಅಪಾರ ಜಿಲ್ಲಾಧಿಕಾರಿಗಳಾದ ಮಹಮ್ಮದ್ ಜುಬೇರ್ ರವರಿಗೆ ಉಪನ್ಯಾಸಕ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಎನ್ ರಾಜಣ್ಣ ಮತ್ತು ತಾಲೂಕು ಉಪನ್ಯಾಸಕ ಸಂಘದ ಅಧ್ಯಕ್ಷ ಬಿ.ಪಿ. ಕಲ್ಲಪ್ಪ ಹಾಗೂ ಪ್ರಾಚಾರ್ಯ ಸಂಘದ ಅಧ್ಯಕ್ಷರಾದ ಸಣ್ಣ ಶಿವರಾಂ ಕಾರ್ಯಾಧ್ಯಕ್ಷರಾದ ಎಂ ಶ್ರೀಶೈಲ, ಕಾರ್ಯದರ್ಶಿಗಳಾದ ಪಿ ನಾಗೇಶ್ವರರಾವ್ ಹಾಗೂ ವಿವಿಧ ಕಾಲೇಜಿನ ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಸಮ್ಮುಖದಲ್ಲಿ ವಿನಂತಿಸಿಕೊಂಡರು.
ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸುವ ಕುರಿತು ಪ್ರಸ್ತಾಪಿತ ಸರ್ಕಾರದ ಕಡತ ಸಂಖ್ಯೆ ಇP 10 2026 ಅನ್ನು ಕೂಡಲೇ ಹಿಂಪಡೆಯಬೇಕು.ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಯಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ 320:1 ವಿದ್ಯಾರ್ಥಿ–ಉಪನ್ಯಾಸಕರ ಅನುಪಾತವನ್ನು ಓಅಇಖಖಿ ಮಾರ್ಗಸೂಚಿಗಳನ್ವಯ ಮರುನಿಗದಿಪಡಿಸಬೇಕು. ಕಳೆದ ಮೂರು ವರ್ಷಗಳಿಂದ ಪರಿಷ್ಕರಿಸದಿರುವ ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಭತ್ಯೆ ಹಾಗೂ ಪರೀಕ್ಷಾ ಸಂಭಾವನೆಯನ್ನು ತಕ್ಷಣ ಪರಿಷ್ಕರಿಸಿ, ಹಿಂದಿನ ವರ್ಷದ ಬಾಕಿ ಇರುವ ಸಂಭಾವನೆಗಳನ್ನು ತಕ್ಷಣ ಪಾವತಿಸಬೇಕು. ಪ್ರಥಮ ಅದ್ಯತೆಯಾಗಿ ಸಂಭವಾನೆಗಳನ್ನು ಖಾಸಗಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರಿಗೆ ವಿತರಿಸಬೇಕು. ಕಾರ್ಯಭಾರ ಕೊರತೆ ಇರುವ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಸೇವೆಯಿಂದ ವಿಮುಕ್ತಿಗೊಳಿಸುವ ಆದೇಶವನ್ನು ಹಿಂಪಡೆದು, ಅವರಿಗೆ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರ ನೀಡುವ ಕುರಿತು ಸಲ್ಲಿಸಲಾದ ಪ್ರಸ್ತಾವನೆಗೆ ಅನುಮೋದನೆ ನೀಡಬೇಕು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಹಾಗೂ ಪದೋನ್ನತಿ ಹೊಂದಿದ ಪ್ರಾಂಶುಪಾಲರ ಸ್ಥಳನಿಯುಕ್ತಿಯ ಸಂದರ್ಭದಲ್ಲಿ ಎಲ್ಲಾ ಖಾಲಿ ಹುದ್ದೆಗಳನ್ನು ಯಾವುದೇ ನಿರ್ಬಂಧವಿಲ್ಲದೆ ಆಯ್ಕೆ ಮಾಡಲು ಮುಕ್ತ ಅವಕಾಶ ನೀಡಬೇಕು ಎಂದು ಮನವಿಪತ್ರದಲ್ಲಿ ಒತ್ತಾಯಿಸಲಾಗಿದೆ.
WhatsApp Group Join Now
Telegram Group Join Now
Share This Article