ಬೆಂಗಳೂರು, ಮೇ 09: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಶುಕ್ರವಾರ (ಮೇ.09) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಸಮೀಕ್ಷೆ ನಡೆಸುವಂತೆ ಸಚಿವರು ಅಭಿಪ್ರಾಯ ನೀಡಿದ್ದಾರೆ. ಮುಂದಿನ ವಾರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.