ಶಿವಮೊಗ್ಗ, ಮೇ 27: ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿಗಮದಲ್ಲಿ 187 ಕೋಟಿ ಹಗರಣ ನಡೆದಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪದ್ಮಾನಾಭ, ಪರಶುರಾಮ್, ಶುಚಿಸ್ವತ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.