ನವದೆಹಲಿ, ಅಕ್ಟೋಬರ್ 13: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಎಸ್ಐಟಿಯಿಂದ ತನಿಖೆ ನಡೆಸಬೇಕು ಎಂದು ಮಾಡಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸರ್ವೋಚ್ಚ ನ್ಯಾಯಪೀಠ, ಎಸ್ಐಟಿಗೆ ತನಿಖೆ ವಹಿಸಲು ನಿರಾಕರಿಸಿತು. ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದಲ್ಲಿ ಬಗೆಹರಿಸಿಕೊಳ್ಳಬೇಕೆಂದು ಅರ್ಜಿದಾರರಿಗೆ ಕೋರ್ಟ್ ಸೂಚಿಸಿತು.