ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಈ ವೇಳೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ತೀವ್ರ ಛೀಮಾರಿ ಹಾಕಿದೆ. ಇಂತಹ ಗೂಂಡಾ ಸಿಎಂ ಮನೆಯಲ್ಲಿ ಕೆಲಸ ಮಾಡಬೇಕಾ ಎಂದು ಕೋರ್ಟ್ ಪ್ರಶ್ನಿಸಿದೆ.
ಈ ವರ್ಷದ ಆರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಬಿಭವ್ ಕುಮಾರ್ ಹಲ್ಲೆ ನಡೆಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಉಜ್ವಲ್ ಭುಯಾನ್ ಅವರ ಪೀಠವು ಬಿಭವ್ ಕುಮಾರ್ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದಿನ ಬುಧವಾರಕ್ಕೆ ಮುಂದೂಡಿದೆ. ದೆಹಲಿ ಹೈಕೋರ್ಟ್ ದಾಖಲಿಸಿದ ಘಟನೆಯ ವಿವರಗಳಿಂದ ನ್ಯಾಯಾಲಯದ ಆಘಾತಕ್ಕೆ ಗುರಿ ಮಾಡಿತು ಎಂದು ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿಗೆ ತಿಳಿಸಿದೆ.