ಡಿಕೆ ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ : ಪ್ರಕರಣ ರದ್ದತಿ ಅರ್ಜಿ​ಗೆ ಸುಪ್ರೀಂ ಕೋರ್ಟ್ ನಕಾರ

Ravi Talawar
ಡಿಕೆ ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ : ಪ್ರಕರಣ ರದ್ದತಿ ಅರ್ಜಿ​ಗೆ ಸುಪ್ರೀಂ ಕೋರ್ಟ್ ನಕಾರ
WhatsApp Group Join Now
Telegram Group Join Now

ನವದೆಹಲಿ, ಜುಲೈ 15: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ‌ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್​​ನ ನ್ಯಾ. ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ.

ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.

WhatsApp Group Join Now
Telegram Group Join Now
Share This Article