ಬೆಂಗಳೂರು: 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಿ ಶಾಸಕರಾಗಿ ತಮ್ಮ ಜವಾಬ್ದಾರಿಗಳನ್ನು ಮುಂದುವರಿಸಲು ಅವಕಾಶ ನೀಡುವಂತೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 30 ರಂದು, ಸ್ಪೀಕರ್ ಅವರೊಂದಿಗೆ ಮಾತನಾಡಿ, ಅವರ ನಿರ್ಧಾರದ ಪರಿಣಾಮಗಳನ್ನು ವಿವರಿಸಿ, ಮರುಪರಿಶೀಲಿಸುವಂತೆ ಅಥವಾ ಶಾಸಕರ ಮೇಲೆ ವಿಧಿಸಲಾದ ಷರತ್ತುಗಳನ್ನು ಸಡಿಲಿಸುವಂತೆ ವಿನಂತಿಸಿದ್ದೇನೆಂದು ಹೇಳಿದರು.
ಸ್ಪೀಕರ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ನನ್ನ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆಂದು ತಿಳಿಸಿದ್ದಾರೆ.